ಜಮಖಂಡಿಯಲ್ಲಿ ಕಾಂಗ್ರೆಸ್ ಸಂಘಟನಾ ಸೃಜನ ಅಭಿಯಾನ
ಬಾಗಲಕೋಟೆ, 27 ಜುಲೈ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಸಮಿತಿಯ (ಡಿಸಿಸಿ) ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಸಂಘಟಿತ ಹಾಗೂ ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾದ ''ಸಂಘಟನಾ ಸೃಜನ ಅಭಿಯಾನ'' ಯಶಸ್ವಿಯಾಗಿ ನಡೆಯಿತು. ಅಭಿಯಾನ
ಆಯ್ಕೆ


ಬಾಗಲಕೋಟೆ, 27 ಜುಲೈ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಸಮಿತಿಯ (ಡಿಸಿಸಿ) ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಸಂಘಟಿತ ಹಾಗೂ ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾದ 'ಸಂಘಟನಾ ಸೃಜನ ಅಭಿಯಾನ' ಯಶಸ್ವಿಯಾಗಿ ನಡೆಯಿತು.

ಅಭಿಯಾನದಲ್ಲಿ ಎಐಸಿಸಿ ಕಾರ್ಯದರ್ಶಿಗಳಾದ ಬೆಳ್ಳಯ್ಯಾ ನಾಯಕ ಅವರೊಂದಿಗೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿ, ಪಕ್ಷದ ಸಂಘಟನೆ ಬಲವರ್ಧನೆ ಮತ್ತು ಮುಂಬರುವ ರಾಜಕೀಯ ಸವಾಲುಗಳನ್ನು ಎದುರಿಸುವ ಕುರಿತು ಚರ್ಚೆ ನಡೆಸಿದರು.

ಕಾರ್ಯಕ್ರಮದಲ್ಲಿ ಪಕ್ಷದ ತಳಮಟ್ಟದ ಸಂಘಟನೆಯನ್ನು ಇನ್ನಷ್ಟು ಸದೃಢಗೊಳಿಸುವುದು, ಹೊಸ ಸದಸ್ಯರನ್ನು ಪಕ್ಷದತ್ತ ಸೆಳೆಯುವುದು, ಯುವಜನರು ಹಾಗೂ ಮಹಿಳೆಯರಿಗೆ ಹೆಚ್ಚಿನ ಜವಾಬ್ದಾರಿ ನೀಡುವುದು ಮತ್ತು ಕಾರ್ಯಕರ್ತರ ಅಭಿಪ್ರಾಯಗಳನ್ನು ಆಲಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ವೇಗ ನೀಡುವ ಬಗ್ಗೆ ಸಮಾಲೋಚನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಎಐಸಿಸಿ ಕಾರ್ಯದರ್ಶಿಗಳಾದ ಬೆಳ್ಳಯ್ಯಾ ನಾಯಕ, ಕಾಂಗ್ರೆಸ್ ಪಕ್ಷದ ಬಲ ಕಾರ್ಯಕರ್ತರೇ ಆಗಿದ್ದು, ಸಂಘಟನೆಯ ಬಲವರ್ಧನೆಯ ಮೂಲಕ ಜನರ ವಿಶ್ವಾಸವನ್ನು ಮತ್ತಷ್ಟು ಗಟ್ಟಿಗೊಳಿಸಬೇಕಾಗಿದೆ ಎಂದು ತಿಳಿಸಿದರು. ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ಅಭಿಪ್ರಾಯಕ್ಕೂ ಮಹತ್ವ ನೀಡಲಾಗುತ್ತಿದ್ದು, ಪ್ರಜಾಪ್ರಭುತ್ವದ ಮೌಲ್ಯಗಳ ಆಧಾರದ ಮೇಲೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ನಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಸ್. ಜಿ. ನಂಜಯ್ಯನಮಠ, ಹಿರಿಯ ಮುಖಂಡರಾದ ಸೋಮಣ್ಣ ಬೇವಿನಮರದ, ಕಾಂತಾ ನಾಯಕ, ಕಿರಣ್ ಮೂಗಬಸವ ಸೇರಿದಂತೆ ಜಮಖಂಡಿ ಕ್ಷೇತ್ರದ ಹಲವು ಹಿರಿಯ ನಾಯಕರು, ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಪಕ್ಷದ ಉತ್ಸಾಹಿ ಕಾರ್ಯಕರ್ತರು ಭಾಗವಹಿಸಿ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande