ರಾಜ್ಯದಲ್ಲಿ ಭೀಕರ ಬರಗಾಲ: ಪರಿಹಾರ ಒದಗಿಸುವಂತೆ ಕೇಂದ್ರಕ್ಕೆ ಸಚಿವ ಕೆ.ಎಚ್. ಮುನಿಯಪ್ಪ ಆಗ್ರಹ
ಬೆಂಗಳೂರು, 27 ಜುಲೈ (ಹಿ.ಸ.): ಆ್ಯಂಕರ್: ಕರ್ನಾಟಕದಲ್ಲಿ ಮಳೆಯ ಕೊರತೆಯಿಂದಾಗಿ ಕಳೆದ 60 ವರ್ಷಗಳ ಇತಿಹಾಸದಲ್ಲೇ ಕಾಣದಂತಹ ಭೀಕರ ಬರ ಪರಿಸ್ಥಿತಿ ತಲೆದೋರಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮ
ಸಂದರ್ಭಿಕ ಚಿತ್ರ


ಬೆಂಗಳೂರು, 27 ಜುಲೈ (ಹಿ.ಸ.):

ಆ್ಯಂಕರ್:

ಕರ್ನಾಟಕದಲ್ಲಿ ಮಳೆಯ ಕೊರತೆಯಿಂದಾಗಿ ಕಳೆದ 60 ವರ್ಷಗಳ ಇತಿಹಾಸದಲ್ಲೇ ಕಾಣದಂತಹ ಭೀಕರ ಬರ ಪರಿಸ್ಥಿತಿ ತಲೆದೋರಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಹಲವೆಡೆ ಮಳೆಯಿಲ್ಲದೆ ಸಾವಿರಾರು ಕೋಟಿ ರೂಪಾಯಿ ಬೆಳೆಗಳು ನಾಶವಾಗಿ ರೈತರು ದಿಕ್ಕುಹೋಚದ ಸ್ಥಿತಿಯಲ್ಲಿದ್ದಾರೆ ಎಂದು ಹೇಳಿದರು. ಅಷ್ಟೇ ಅಲ್ಲದೆ, ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವಿನ ಗಂಭೀರ ಕೊರತೆಯೂ ಉಂಟಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಉಂಟಾಗಿರುವ ಈ ನೈಸರ್ಗಿಕ ವಿಕೋಪದ ಸಂದರ್ಭದಲ್ಲಿ ಕೇವಲ ರಾಜ್ಯ ಸರ್ಕಾರದ ಸಂಪನ್ಮೂಲಗಳಿಂದ ಮಾತ್ರ ಎಲ್ಲ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ. ಹೀಗಾಗಿ, ಸಂಕಷ್ಟದಲ್ಲಿರುವ ರಾಜ್ಯದ ಜನತೆ ಮತ್ತು ರೈತರನ್ನು ರಕ್ಷಿಸಲು ಕೇಂದ್ರ ಸರ್ಕಾರವು ಧನಸಹಾಯ ಮತ್ತು ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸುವುದು ಅತಿವಶ್ಯಕ ಎಂದು ಸಚಿವರು ಒತ್ತಾಯಿಸಿದರು.

ರಾಜ್ಯದಲ್ಲಿ ಎದುರಾಗಿರುವ ಬರಗಾಲದ ಸ್ಥಿತಿಗತಿ ಹಾಗೂ ಕೇಂದ್ರದಿಂದ ಬರಬೇಕಿರುವ ಪರಿಹಾರದ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳು ದೆಹಲಿಯಲ್ಲಿ ಕೇಂದ್ರ ಸಚಿವರು ಹಾಗೂ ರಾಜ್ಯದ ಸಂಸದರ ಪ್ರಮುಖ ಸಭೆಯನ್ನು ಕರೆದಿದ್ದಾರೆ.

ಕೇಂದ್ರದ ನಾಯಕರು ಹಾಗೂ ಪ್ರಲ್ಹಾದ್ ಜೋಶಿ, ಶೋಭಾ ಕಂದಲಾಜೆ, ವಿ. ಸೋಮಣ್ಣ ಸೇರಿದಂತೆ ಕೇಂದ್ರದಲ್ಲಿರುವ ಕನ್ನಡಿಗ ಸಚಿವರು ಈ ವಿಚಾರದಲ್ಲಿ ಕೈಜೋಡಿಸಬೇಕು ಎಂದರು. ಕೇಂದ್ರ ಸರ್ಕಾರದ ಉನ್ನತ ಮಟ್ಟದ ಸಮಿತಿಯೊಂದು ಶೀಘ್ರದಲ್ಲೇ ರಾಜ್ಯಕ್ಕೆ ಆಗಮಿಸಿ ಬೆಳೆ ಹಾನಿಯ ನೇರ ಸಮೀಕ್ಷೆ ನಡೆಸಿ, ವಾಸ್ತವ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಬೇಕು ಹಾಗೂ ತಕ್ಷಣವೇ ನೆರವು ಬಿಡುಗಡೆ ಮಾಡಬೇಕು ಎಂದು ಸಚಿವ ಕೆ.ಎಚ್. ಮುನಿಯಪ್ಪ ಆಗ್ರಹಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande