ಮಕ್ಕಳ ಭವಿಷ್ಯ ರೂಪಿಸಲು ಕಾನೂನು ಅರಿವು ಅತ್ಯವಶ್ಯ: ನ್ಯಾ. ಎಸ್. ಸುನಿಲ್ ದತ್ ಯಾದವ್
ಧಾರವಾಡ, 27 ಜುಲೈ (ಹಿ.ಸ.): ಆ್ಯಂಕರ್: ಮಕ್ಕಳಿಗೆ ಕಾನೂನುಗಳ ಬಗ್ಗೆ ಅರಿವು ಮೂಡಿಸುವುದು ಅವರ ಸುರಕ್ಷಿತ ಹಾಗೂ ಉತ್ತಮ ಭವಿಷ್ಯ ನಿರ್ಮಾಣಕ್ಕೆ ಅತ್ಯವಶ್ಯ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಜೆಜೆಸಿ ಮತ್ತು ಪೋಕ್ಸೊ ಸಮಿತಿಯ ಅಧ್ಯಕ್ಷ ಎಸ್. ಸುನಿಲ್ ದತ್ ಯಾದವ್ ಹೇಳಿದರು. ಬೇಲೂರು
Awareness


ಧಾರವಾಡ, 27 ಜುಲೈ (ಹಿ.ಸ.):

ಆ್ಯಂಕರ್:

ಮಕ್ಕಳಿಗೆ ಕಾನೂನುಗಳ ಬಗ್ಗೆ ಅರಿವು ಮೂಡಿಸುವುದು ಅವರ ಸುರಕ್ಷಿತ ಹಾಗೂ ಉತ್ತಮ ಭವಿಷ್ಯ ನಿರ್ಮಾಣಕ್ಕೆ ಅತ್ಯವಶ್ಯ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಜೆಜೆಸಿ ಮತ್ತು ಪೋಕ್ಸೊ ಸಮಿತಿಯ ಅಧ್ಯಕ್ಷ ಎಸ್. ಸುನಿಲ್ ದತ್ ಯಾದವ್ ಹೇಳಿದರು.

ಬೇಲೂರು ಕೈಗಾರಿಕಾ ಪ್ರದೇಶದ ಜಲ ಮತ್ತು ಭೂ ನಿರ್ವಹಣಾ ಸಂಸ್ಥೆಯಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಮಕ್ಕಳ ರಕ್ಷಣಾ ನಿರ್ದೇಶನಾಲಯ ಸಹಯೋಗದಲ್ಲಿ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳು, ಮಹಿಳೆಯರು, ಲೈಂಗಿಕ ದೌರ್ಜನ್ಯ ಸಂತ್ರಸ್ತರು, ವಿಕಲಚೇತನರು ಹಾಗೂ ಇತರ ಸಂವೇದನಾಶೀಲ ಸಾಕ್ಷಿಗಳ ಹಕ್ಕು ಮತ್ತು ಗೌರವವನ್ನು ಕಾಪಾಡುವುದರ ಜೊತೆಗೆ ಪ್ರಕರಣಗಳ ಗೌಪ್ಯತೆಯನ್ನು ಬೆಂಬಲ ವ್ಯಕ್ತಿಗಳು ಕಡ್ಡಾಯವಾಗಿ ಕಾಪಾಡಬೇಕು ಎಂದು ಅವರು ತಿಳಿಸಿದರು.

ಮಕ್ಕಳ ರಕ್ಷಣಾ ನಿರ್ದೇಶಕಿ ಡಾ. ಸ್ನೇಹಾ ಸಿ.ವಿ. ಮಾತನಾಡಿ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಿದರೆ ಇಂತಹ ಅಪರಾಧಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಮಾತನಾಡಿ, ಮಕ್ಕಳ ರಕ್ಷಣೆ ಕೇವಲ ಪೊಲೀಸ್ ಇಲಾಖೆಯ ಜವಾಬ್ದಾರಿಯಲ್ಲ, ಸಮಾಜದ ಪ್ರತಿಯೊಬ್ಬರ ಹೊಣೆಗಾರಿಕೆಯಾಗಿದೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟಲು ಎಲ್ಲರೂ ಜಾಗೃತರಾಗಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎಚ್.ಟಿ. ನರೇಂದ್ರ ಪ್ರಸಾದ್, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎನ್.ವಿ. ವಿಜಯ್, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್. ಶಶಿಧರ ಶೆಟ್ಟಿ ಸೇರಿದಂತೆ ನ್ಯಾಯಾಂಗ, ಮಕ್ಕಳ ರಕ್ಷಣಾ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande