ತುಮಕೂರು: ಮತದಾರರ ಪಟ್ಟಿ ಪರಿಷ್ಕರಣೆ ಪ್ರಗತಿ ಪರಿಶೀಲನೆ
ತುಮಕೂರು, 27 ಜುಲೈ (ಹಿ.ಸ.): ಆ್ಯಂಕರ್:ಜಿಲ್ಲಾಧಿಕಾರಿಗಳು ಸೋಮವಾರ ಕೇಸ್ವಾನ್ ಮೂಲಕ ನಡೆದ ಸಭೆಯಲ್ಲಿ ಜಿಲ್ಲೆಯ ಎಲ್ಲಾ ಚುನಾವಣಾ ನೋಂದಣಾಧಿಕಾರಿಗಳು, ಸಹಾಯಕ ಚುನಾವಣಾ ನೋಂದಣಾಧಿಕಾರಿಗಳು ಹಾಗೂ ಹೋಬಳಿ ಮಟ್ಟದ ನೋಡಲ್ ಅಧಿಕಾರಿಗಳೊಂದಿಗೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಪ್ರಗತಿ ಪರಿಶೀಲನೆ ನಡೆಸಿದರು
SIR meeting


ತುಮಕೂರು, 27 ಜುಲೈ (ಹಿ.ಸ.):

ಆ್ಯಂಕರ್:ಜಿಲ್ಲಾಧಿಕಾರಿಗಳು ಸೋಮವಾರ ಕೇಸ್ವಾನ್ ಮೂಲಕ ನಡೆದ ಸಭೆಯಲ್ಲಿ ಜಿಲ್ಲೆಯ ಎಲ್ಲಾ ಚುನಾವಣಾ ನೋಂದಣಾಧಿಕಾರಿಗಳು, ಸಹಾಯಕ ಚುನಾವಣಾ ನೋಂದಣಾಧಿಕಾರಿಗಳು ಹಾಗೂ ಹೋಬಳಿ ಮಟ್ಟದ ನೋಡಲ್ ಅಧಿಕಾರಿಗಳೊಂದಿಗೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಪ್ರಗತಿ ಪರಿಶೀಲನೆ ನಡೆಸಿದರು.

ಜಿಲ್ಲೆಯಲ್ಲಿ ಇದುವರೆಗೆ ಶೇ.83ರಷ್ಟು ಪ್ರಗತಿ ಸಾಧಿಸಿರುವುದಾಗಿ ತಿಳಿಸಿದ ಜಿಲ್ಲಾಧಿಕಾರಿಗಳು, ಉಳಿದಿರುವ ಶೇ.17ರಷ್ಟು ಕಾರ್ಯವನ್ನು ಇದೇ ವಾರದೊಳಗೆ ಪೂರ್ಣಗೊಳಿಸಿ ಶೇ.100ರಷ್ಟು ಗುರಿ ಸಾಧಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಅಲ್ಲದೆ, ಅನುಮಾನಾಸ್ಪದ ಬಹು ನೋಂದಣಿ ಪಟ್ಟಿಗೆ ಸಂಬಂಧಿಸಿದಂತೆ ಮತಗಟ್ಟೆ ಮಟ್ಟದ ಅಧಿಕಾರಿಗಳು ಹಾಗೂ ಮತಗಟ್ಟೆ ಮಟ್ಟದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಸಭೆಯ ಕಾರ್ಯವಿವರ ದಾಖಲೆಯನ್ನು ಜಾಗತಿಕ ಸ್ಥಾನ ನಿರ್ಣಯ ವ್ಯವಸ್ಥೆಯ ಮಾಹಿತಿಯುಳ್ಳ ಛಾಯಾಚಿತ್ರಗಳೊಂದಿಗೆ ಸಂಬಂಧಿತ ಜಾಲತಾಣಕ್ಕೆ ಕಡ್ಡಾಯವಾಗಿ ಅಪ್‌ಲೋಡ್ ಮಾಡುವಂತೆ ನಿರ್ದೇಶನ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande