
ಬೆಂಗಳೂರು, 27 ಜುಲೈ (ಹಿ.ಸ.):
ಆ್ಯಂಕರ್:
ಅನಿವಾರ್ಯ ಕಾರಣಗಳಿಂದ ಮುಂದೆ ಹೋಗಿದ್ದ ಸಚಿವ ಸಂಪುಟ ವಿಸ್ತರಣೆಯು ಮುಂಬರುವ ಬುಧವಾರ ಅಥವಾ ಗುರುವಾರದೊಳಗೆ ಅಂತಿಮವಾಗಿ ಪೂರ್ಣಗೊಳ್ಳಲಿದೆ ಎಂದು ಶಾಸಕ ಕೆ.ಎಸ್. ಶಿವಲಿಂಗೇಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದೆಹಲಿಗೆ ತೆರಳುವ ಮುನ್ನ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡಲು ತೆರಳುತ್ತಿರುವುದಾಗಿ ತಿಳಿಸಿದ್ದಾರೆ.
ಮಂತ್ರಿಮಂಡಲ ಸೇರಲು ತಾವೂ ಸೇರಿದಂತೆ ಸಾಕಷ್ಟು ಜನ ಪ್ರಬಲ ಆಕಾಂಕ್ಷೆಗಳಿರುವುದಾಗಿ ತಿಳಿಸಿದ ಅವರು, ಯಾವ ಜಿಲ್ಲೆಗೆ ಪ್ರಾಮುಖ್ಯತೆ ನೀಡಬೇಕು ಎಂಬುದನ್ನು ಮುಖ್ಯಮಂತ್ರಿಗಳು, ಡಿಸಿಎಂ ಹಾಗೂ ಪಕ್ಷದ ವರಿಷ್ಠರು ಚರ್ಚಿಸಿ ತೀರ್ಮಾನಿಸಲಿದ್ದಾರೆ ಎಂದಿದ್ದಾರೆ. ತಮಗೆ ಯಾವುದೇ ನಿರ್ದಿಷ್ಟ ಖಾತೆ ಬೇಕು ಎಂದು ಬೇಡಿಕೆ ಇಟ್ಟಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಹೈಕಮಾಂಡನಿಂದ ಅಧಿಕೃತ ಪಟ್ಟಿ ಹೊರಬರುವವರೆಗೂ ಎಲ್ಲವೂ ಅಂತಿಮವಲ್ಲ ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII