ಚುನಾವಣಾ ರಾಜಕೀಯ ನಿವೃತ್ತಿ ಸಿದ್ದರಾಮಯ್ಯ ಸ್ವಂತ ನಿರ್ಧಾರ: ಯತೀಂದ್ರ ಸ್ಪಷ್ಟನೆ
ಮೈಸೂರು, 27 ಜುಲೈ (ಹಿ.ಸ.): ಆ್ಯಂಕರ್: ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಸಂಪೂರ್ಣವಾಗಿ ಅವರದ್ದೇ ಆದ ಸ್ವಂತ ನಿರ್ಧಾರವಾಗಿದೆ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾ
ಸಂದರ್ಭಿಕ ಚಿತ್ರ


ಮೈಸೂರು, 27 ಜುಲೈ (ಹಿ.ಸ.):

ಆ್ಯಂಕರ್:

ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಸಂಪೂರ್ಣವಾಗಿ ಅವರದ್ದೇ ಆದ ಸ್ವಂತ ನಿರ್ಧಾರವಾಗಿದೆ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣಾ ರಾಜಕೀಯವು ಬಹಳಷ್ಟು ಕಲುಷಿತಗೊಂಡಿದೆ ಎಂಬ ಕಾರಣದಿಂದ ಸಿದ್ದರಾಮಯ್ಯನವರು ಮೊದಲಿನಿಂದಲೂ ಈ ಬಗ್ಗೆ ಹೇಳುತ್ತಾ ಬಂದಿದ್ದಾರೆ.

ಮುಖ್ಯಮಂತ್ರಿಗಳಾಗಿದ್ದಾಗಲೂ ಅವರು ಇದೇ ಮಾತನ್ನು ಪುನರುಚ್ಚರಿಸಿದ್ದರು. ಹೀಗಾಗಿ 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬ ಅವರ ನಿರ್ಧಾರಕ್ಕೆ ಎಲ್ಲರೂ ಗೌರವ ನೀಡಬೇಕು ಎಂದು ತಿಳಿಸಿದರು.

ಅಭಿಮಾನಿಗಳಿಂದ ಸ್ಪರ್ಧಿಸುವಂತೆ ತೀವ್ರ ಒತ್ತಡವಿದ್ದರೂ, ಅವರು ಒಮ್ಮೆ ತೆಗೆದುಕೊಂಡ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಯತೀಂದ್ರ ಹೇಳಿದರು.

ಸಿದ್ದರಾಮಯ್ಯನವರು ಚುನಾವಣಾ ರಾಜಕೀಯದಿಂದ ದೂರವಿದ್ದರೂ ಸಹ ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯಲಿದ್ದು, ಸಮಾಜದ ಶೋಷಿತ ವರ್ಗಗಳು ಹಾಗೂ ಸಂಕಷ್ಟದಲ್ಲಿರುವವರ ಪರವಾಗಿ ಸದಾ ಧ್ವನಿ ಎತ್ತುವ ಕೆಲಸ ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಮುಂದುವರಿದು ಮಾತನಾಡುತ್ತಾ, ಸಿದ್ದರಾಮಯ್ಯನವರಿಗೆ ಈಗ ಸುಮಾರು 80 ವರ್ಷ ಹತ್ತಿರವಾಗುತ್ತಿದೆ. ವಯೋಸಹಜವಾಗಿ ಅವರು ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು ಮತ್ತು ಕೆಲಸದೊತ್ತಡದಲ್ಲಿ ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬಾರದು ಎಂಬುದು ತಮ್ಮ ಕುಟುಂಬದ ಬಯಕೆಯೂ ಹೌದು ಎಂದು ಡಾ. ಯತೀಂದ್ರ ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande