
ನವದೆಹಲಿ, ಜುಲೈ 28(ಹಿ.ಸ.):
ಆ್ಯಂಕರ್:ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟ–2026ರಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಲೋಕಸಭಾಧ್ಯಕ್ಷ ಓಂ ಬಿರ್ಲಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಕ್ರೀಡಾ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅಭಿನಂದನೆ ಸಲ್ಲಿಸಿದ್ದಾರೆ.
ಮಹಿಳೆಯರ ಎಫ್–57 ಶಾಟ್‌ಪುಟ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಶರ್ಮಿಳಾ ಧನಖಡ್, ಪುರುಷರ ಎತ್ತರ ಜಿಗಿತದಲ್ಲಿ ಬೆಳ್ಳಿ ಪದಕ ಜಯಿಸಿದ ಸರ್ವೇಶ್ ಅನಿಲ್ ಕುಶಾರೆ, ಪುರುಷರ 79 ಕೆ.ಜಿ. ವೇಟ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ ಪಡೆದ ವಲ್ಲೂರಿ ಅಜಯ್ ಬಾಬು ಹಾಗೂ ಮಹಿಳೆಯರ ಎಫ್–57 ಶಾಟ್‌ಪುಟ್‌ನಲ್ಲಿ ಕಂಚಿನ ಪದಕ ಗೆದ್ದ ಶಿಲ್ಪಾ ಕೆ. ಶೈಲಾ ಅವರನ್ನು ರಾಷ್ಟ್ರಪತಿ ಅಭಿನಂದಿಸಿದರು. ಶರ್ಮಿಳಾ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ ಅಥ್ಲೀಟ್ ಎಂಬ ಐತಿಹಾಸಿಕ ಸಾಧನೆ ಮಾಡಿದ್ದಾರೆ ಎಂದು ಶ್ಲಾಘಿಸಿದರು.
ಮಹಿಳೆಯರ 58 ಕೆ.ಜಿ. ವೇಟ್‌ಲಿಫ್ಟಿಂಗ್‌ನಲ್ಲಿ ಕಂಚಿನ ಪದಕ ಗೆದ್ದ ಬಿಂದ್ಯಾರಾಣಿ ದೇವಿ ಸೊರೋಖೈಬಂ ಅವರನ್ನು ಲೋಕಸಭಾಧ್ಯಕ್ಷ ಓಂ ಬಿರ್ಲಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿ, ಅವರ ಸಾಧನೆ ದೇಶಕ್ಕೆ ಹೆಮ್ಮೆ ತಂದಿದೆ ಎಂದು ಹೇಳಿದ್ದಾರೆ.
ಕೇಂದ್ರ ಕ್ರೀಡಾ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು ಶರ್ಮಿಳಾ ಅವರ ಚಿನ್ನದ ಪದಕ ಸಾಧನೆ ಭಾರತೀಯ ಕ್ರೀಡಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಎಂದು ಪ್ರಶಂಸಿಸಿದ್ದಾರೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.