ಗಲಗಲಿಯಲ್ಲಿ ವಿವಾಹಿತೆಯ ಅನುಮಾನಾಸ್ಪದ ಸಾವು: ರಕ್ಷಿಸುವ ಬದಲು ವಿಡಿಯೋ ಮಾಡಿದ ಆರೋಪ, ಪತಿ ವಿರುದ್ಧ ಅನುಮಾನ
ಬಾಗಲಕೋಟೆ, 28 ಜುಲೈ (ಹಿ.ಸ.): ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ 23 ವರ್ಷದ ವಿವಾಹಿತೆ ಭಾಗ್ಯಶ್ರೀ ಉರ್ಫ್ ಪ್ರಗತಿ ಅವರ ಅನುಮಾನಾಸ್ಪದ ಸಾವು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಉಸಿರಾಟಕ್ಕಾಗಿ ಒದ್ದಾಡುತ್ತಿದ್ದ ಸಂದರ್ಭದಲ
ಸಾವು


ಡೆತ್


ಬಾಗಲಕೋಟೆ, 28 ಜುಲೈ (ಹಿ.ಸ.):

ಆ್ಯಂಕರ್ :

ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ 23 ವರ್ಷದ ವಿವಾಹಿತೆ ಭಾಗ್ಯಶ್ರೀ ಉರ್ಫ್ ಪ್ರಗತಿ ಅವರ ಅನುಮಾನಾಸ್ಪದ ಸಾವು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಉಸಿರಾಟಕ್ಕಾಗಿ ಒದ್ದಾಡುತ್ತಿದ್ದ ಸಂದರ್ಭದಲ್ಲೂ ರಕ್ಷಿಸಲು ಮುಂದಾಗದೆ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸಿದ್ದಾನೆ ಎಂಬ ಆರೋಪ ಪತಿ ಪ್ರವೀಣ ಜಗಿಳೂರು ವಿರುದ್ಧ ಕೇಳಿಬಂದಿದೆ.

ಆರು ವರ್ಷಗಳ ಹಿಂದೆ ವಿವಾಹವಾಗಿದ್ದ ದಂಪತಿಗೆ ಒಂದು ಗಂಡು ಮಗು ಇದೆ. ಪತ್ನಿಗೆ ಅನೈತಿಕ ಸಂಬಂಧವಿದೆ ಎಂಬ ಶಂಕೆಯಿಂದ ಸಂಬಂಧಿತ ವಿಡಿಯೋ ತೋರಿಸಿದ ಬಳಿಕ ಮನನೊಂದ ಭಾಗ್ಯಶ್ರೀ ಆತ್ಮಹತ್ಯೆ ಮಾಡಿಕೊಂಡರು ಎಂದು ಪತಿ ಪೊಲೀಸರಿಗೆ ಹೇಳಿಕೆ ನೀಡಿರುವ ಮಾಹಿತಿ ಇದೆ.

ಇನ್ನೊಂದೆಡೆ, ಮೃತಳ ಕುಟುಂಬಸ್ಥರು ಇದು ಆತ್ಮಹತ್ಯೆಯಲ್ಲ, ಕೊಲೆ ಆಗಿರಬಹುದೆಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ವರದಿ, ತಾಂತ್ರಿಕ ಸಾಕ್ಷ್ಯಗಳು ಹಾಗೂ ಕುಟುಂಬಸ್ಥರ ಹೇಳಿಕೆಗಳ ಆಧಾರದ ಮೇಲೆ ಸಾವಿನ ನಿಖರ ಕಾರಣ ತಿಳಿದುಬರಲಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದು, ತನಿಖೆ ಪೂರ್ಣಗೊಳ್ಳುವವರೆಗೆ ಯಾವುದೇ ಅಂತಿಮ ನಿರ್ಣಯಕ್ಕೆ ಬರಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande