
ಬೆಂಗಳೂರು, 28 ಜುಲೈ (ಹಿ.ಸ.):
ಆ್ಯಂಕರ್:
ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು, ಆಗಸ್ಟ್ 13, 2026ರ ಗುರುವಾರದಿಂದ ಅಧಿವೇಶನ ಅಧಿಕೃತವಾಗಿ ಆರಂಭವಾಗಲಿದೆ. ಬೆಂಗಳೂರಿನ ವಿಧಾನಸಭೆಯ ಸಭಾಂಗಣದಲ್ಲಿ ಬೆಳಿಗ್ಗೆ 11.00 ಗಂಟೆಗೆ ಉಭಯ ಸದನಗಳ ಕಲಾಪಗಳು ಸೇರಲಿವೆ ಎಂದು ಕರ್ನಾಟಕ ವಿಧಾನಸಭೆ ಸಚಿವಾಲಯವು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
2026ರ ಆಗಸ್ಟ್ 13ರ ಗುರುವಾರದಿಂದ ಪ್ರಾರಂಭವಾಗುವ ಈ ಕಲಾಪವು ಆಗಸ್ಟ್ 27ರವರೆಗೆ ವಿವಿಧ ಕಲಾಪಗಳೊಂದಿಗೆ ಮುಂದುವರಿಯಲಿದೆ.
ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಹೊಸ ಸರ್ಕಾರದ ಮೊದಲ ಅಧಿವೇಶನ ಇದಾಗಿದ್ದು, ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯ ಬಳಿಕ ನಡೆಯುತ್ತಿರುವ ಮೊದಲ ಕಲಾಪ ಇದಾಗಿದೆ.
ಹೊಸ ಸಚಿವರು ತಮ್ಮ ಇಲಾಖೆಗಳ ಜವಾಬ್ದಾರಿಗಳನ್ನು ವಹಿಸಿಕೊಂಡು ಸದನದಲ್ಲಿ ಎದುರಾಗುವ ಪ್ರಶ್ನೆಗಳಿಗೆ ಉತ್ತರಿಸಲು ಸಜ್ಜಾಗುತ್ತಿದ್ದಾರೆ. ಮತ್ತೊಂದೆಡೆ, ಬರ ನಿರ್ವಹಣೆ, ಪ್ರಮುಖ ಅಭಿವೃದ್ಧಿ ಯೋಜನೆಗಳು ಹಾಗೂ ಜನಸಾಮಾನ್ಯರ ವಿವಿಧ ಸಮಸ್ಯೆಗಳ ಕುರಿತು ಸರ್ಕಾರದ ಬರ ನಿರ್ವಹಣೆ, ಪ್ರಮುಖ ಅಭಿವೃದ್ಧಿ ಯೋಜನೆಗಳು ಹಾಗೂ ಜನಸಾಮಾನ್ಯರ ವಿವಿಧ ಸಮಸ್ಯೆಗಳ ಕುರಿತು ಸರ್ಕಾರದ ವಿರುದ್ಧ ತೀವ್ರ ಚರ್ಚೆ ನಡೆಸಲು ವಿರೋಧ ಪಕ್ಷಗಳು ರಣತಂತ್ರ ರೂಪಿಸುತ್ತಿವೆ.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII