
ಶಿವಮೊಗ್ಗ, 29 ಜುಲೈ (ಹಿ.ಸ.):
ಆ್ಯಂಕರ್:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2026-27ನೇ ಸಾಲಿನ ಹೊಯ್ಸಳ ಹಾಗೂ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
6 ರಿಂದ 18 ವರ್ಷದೊಳಗಿನ ಧೈರ್ಯ ಸಾಹಸ ಮೆರೆದ ಬಾಲಕರಿಗೆ ಹೊಯ್ಸಳ ಹಾಗೂ ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ನೀಡಿ ತಲಾ ₹10,000 ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುತ್ತದೆ. ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ ಐದು ವರ್ಷಗಳ ಅತ್ಯುತ್ತಮ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ₹25,000 ಹಾಗೂ ಸಂಸ್ಥೆಗಳಿಗೆ ₹1 ಲಕ್ಷ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುತ್ತದೆ.
ಸಾಹಸ ಪ್ರಕರಣವು 2025ರ ಆಗಸ್ಟ್ 1ರಿಂದ 2026ರ ಜುಲೈ 31ರೊಳಗೆ ನಡೆದಿರಬೇಕು. ಅಗತ್ಯ ದಾಖಲೆಗಳೊಂದಿಗೆ ನಿಗದಿತ ಅರ್ಜಿಯನ್ನು ಭರ್ತಿ ಮಾಡಿ ಆಗಸ್ಟ್ 20, 2026ರೊಳಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿ, ಶಿವಮೊಗ್ಗಕ್ಕೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.