ಕ್ರೀಡಾ ವಿದ್ಯಾರ್ಥಿ ವೇತನ ಅರ್ಜಿ ಅವಧಿ ವಿಸ್ತರಣೆ
ಶಿವಮೊಗ್ಗ, 29 ಜುಲೈ (ಹಿ.ಸ.): ಆ್ಯಂಕರ್: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಶೈಕ್ಷಣಿಕ ಶುಲ್ಕ ಮರುಪಾವತಿ ಮತ್ತು ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಗಳಿಗೆ ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜು. 31 ರಿಂದ ಆಗಸ್ಟ್ 31ರವರೆಗೆ ವಿ
ಕ್ರೀಡಾ ವಿದ್ಯಾರ್ಥಿ ವೇತನ ಅರ್ಜಿ ಅವಧಿ ವಿಸ್ತರಣೆ


ಶಿವಮೊಗ್ಗ, 29 ಜುಲೈ (ಹಿ.ಸ.):

ಆ್ಯಂಕರ್: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಶೈಕ್ಷಣಿಕ ಶುಲ್ಕ ಮರುಪಾವತಿ ಮತ್ತು ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಗಳಿಗೆ ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ವಿಸ್ತರಿಸಲಾಗಿದೆ.

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜು. 31 ರಿಂದ ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ. ಕ್ರೀಡಾ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಅರ್ಜಿಯನ್ನು https://sevasindhu.karnataka.gov.in ಪೋರ್ಟಲ್ ಮೂಲಕ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಕ್ರೀಡಾಂಗಣ, ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದೆಂದು

ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande