
ಧಾರವಾಡ, 29 ಜುಲೈ (ಹಿ.ಸ.):
ಆ್ಯಂಕರ್:
ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆಯ ಸಹಯೋಗದಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮವು ಜುಲೈ 30, 2026 ರಂದು ಬೆಳಿಗ್ಗೆ 10 ಗಂಟೆಗೆ ಧಾರವಾಡ ಸಿವಿಲ್ ನ್ಯಾಯಾಲಯಗಳ ಆವರಣದಲ್ಲಿರುವ ಎ.ಡಿ.ಆರ್ ಕಟ್ಟಡದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಮತ್ತು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎನ್. ವಿ. ವಿಜಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೀರನಗೌಡ ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅಥಿಗಳಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರಾದ ಅಲ್ಲಪ್ಪ. ಎಂ. ಬಡಿಗೇರ, ಪೋಲಿಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯಾಧಿಕಾರಿ ಪರಶುರಾಮ ಎಫ್. ಕೆ., ವಾರ್ತಾ ಸಹಾಯಕರಾದ ನಸೀರಾಬಿ. ವೈ. ಶೇಖ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನಲ್ ವಕೀಲೆ ಶ್ರೀದೇವಿ. ಎಸ್. ಕೋಲ್ಹಾರ, ಸಕಿ ಒನ್ ಸ್ಟಾಪ ಸೆಂಟರನ ಪ್ಯಾರಾ ಲೀಗಲ್ ವಕೀಲೆ ಶೋಭಾ ಪವಾರ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.