ಸುಳ್ಳು ಆರೋಪಗಳಿಂದ ಗೊಂದಲ ಸೃಷ್ಟಿಸಲು ರಾಹುಲ್ ಗಾಂಧಿ ಯತ್ನ: ಬಿಜೆಪಿ
ನವದೆಹಲಿ, ಜುಲೈ 29(ಹಿ.ಸ.): ಆ್ಯಂಕರ್:ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಸುಳ್ಳು ಆರೋಪಗಳನ್ನು ಮಾಡಿ ಸಂಸತ್ತಿನ ಒಳಗೆ ಮತ್ತು ಹೊರಗೆ ಗೊಂದಲದ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಆರೋಪಿಸಿದೆ. ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿ ನಡೆದಿದ
संबित पात फाइल फोटो


ನವದೆಹಲಿ, ಜುಲೈ 29(ಹಿ.ಸ.):

ಆ್ಯಂಕರ್:ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಸುಳ್ಳು ಆರೋಪಗಳನ್ನು ಮಾಡಿ ಸಂಸತ್ತಿನ ಒಳಗೆ ಮತ್ತು ಹೊರಗೆ ಗೊಂದಲದ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಆರೋಪಿಸಿದೆ. ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿ ನಡೆದಿದೆ ಎಂಬ ರಾಹುಲ್ ಗಾಂಧಿ ಅವರ ಆರೋಪಗಳು ಸಂಪೂರ್ಣ ಆಧಾರರಹಿತ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.

ಪಕ್ಷದ ರಾಷ್ಟ್ರೀಯ ವಕ್ತಾರ ಹಾಗೂ ಲೋಕಸಭಾ ಸದಸ್ಯ ಡಾ. ಸಂಬಿತ್ ಪಾತ್ರಾ ಅವರು ಬುಧವಾರ ಪಕ್ಷದ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಆದೇಶ ನೀಡಿದ್ದಾರೆ ಎಂಬ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ತಳ್ಳಿಹಾಕಿದರು. ವಿದ್ಯಾರ್ಥಿಗಳ ಮೇಲೆ ಯಾವುದೇ ಗುಂಡಿನ ದಾಳಿ ನಡೆದಿಲ್ಲ. ಯಾವುದೇ ಸಾಕ್ಷ್ಯಾಧಾರವಿಲ್ಲದೆ ಈ ಆರೋಪ ಮಾಡಲಾಗಿದೆ ಎಂದು ಹೇಳಿದರು.

ಸಂಸತ್ತಿನಲ್ಲಿ ಮಾಡುವ ಆರೋಪಗಳಿಗೆ ವಾಸ್ತವಾಂಶಗಳ ಬೆಂಬಲ ಇರಬೇಕು. ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ನಿರ್ಧಾರಗಳನ್ನು ಸಂಬಂಧಿತ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್‌ಗಳು ತೆಗೆದುಕೊಳ್ಳುತ್ತಾರೆ, ಗೃಹ ಸಚಿವರು ಅಲ್ಲ ಎಂದು ಪಾತ್ರಾ ಹೇಳಿದರು.

ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ ಕುರಿತು ನಡೆದ ಚರ್ಚೆಯಲ್ಲಿ ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಸರ್ಕಾರದ ಪರವಾಗಿ ಉತ್ತರಿಸಲು ಸಿದ್ಧರಾಗಿದ್ದರು. ಆದರೆ ಪ್ರತಿಪಕ್ಷವು ಸದನದಲ್ಲಿ ಗೊಂದಲದ ವಾತಾವರಣ ನಿರ್ಮಿಸಲು ಪ್ರಯತ್ನಿಸಿತು ಎಂದು ಅವರು ಆರೋಪಿಸಿದರು.

ವಿದ್ಯಾರ್ಥಿಗಳ ಕುರಿತು ರಾಹುಲ್ ಗಾಂಧಿ ಬಳಸಿದ ಭಾಷೆಯನ್ನು ಟೀಕಿಸಿದ ಪಾತ್ರಾ, ದೇಶದ ಪ್ರತಿಯೊಬ್ಬ ವಿದ್ಯಾರ್ಥಿಯೂ ಸಮಾನ ಎಂಬುದು ಬಿಜೆಪಿಯ ನಿಲುವಾಗಿದೆ ಎಂದರು. ಈ ದೇಶದ ಯಾವುದೇ ವಿದ್ಯಾರ್ಥಿ ಅಂಧಭಕ್ತನೂ ಅಲ್ಲ, ಮೂರ್ಖನೂ ಅಲ್ಲ. ಜಂತರ್-ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಅಂಧಭಕ್ತರೇ? ಅಲ್ಲಿಗೆ ಬಂದವರು ಅಂಧಭಕ್ತರೇ? ಎಂದು ಪ್ರಶ್ನಿಸಿದರು.

ರಾಹುಲ್ ಗಾಂಧಿ ತಮ್ಮ ಹೇಳಿಕೆಗಳಿಗೆ ವಾಸ್ತವಾಂಶಗಳ ಆಧಾರದ ಮೇಲೆ ದೇಶ ಮತ್ತು ಸಂಸತ್ತಿನ ಮುಂದೆ ಉತ್ತರ ನೀಡಬೇಕು ಎಂದು ಡಾ. ಸಂಬಿತ್ ಪಾತ್ರಾ ಆಗ್ರಹಿಸಿದರು.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande