ಗುರು ಪೂರ್ಣಿಮೆ: ರಾಷ್ಟ್ರ ನಾಯಕರಿಂದ ಶುಭಾಶಯ
ನವದೆಹಲಿ, ಜುಲೈ 29(ಹಿ.ಸ.): ಆ್ಯಂಕರ್: ಗುರು ಪೂರ್ಣಿಮೆಯ ಅಂಗವಾಗಿ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್, ಲೋಕಸಭಾಧ್ಯಕ್ಷ ಓಂ ಬಿರ್ಲಾ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ರಾಷ್ಟ್ರೀಯ ನಾಯಕರು ದೇಶದ ಜನತೆಗೆ ಶುಭಾಶಯ ಕೋರಿದ್ದು, ಗುರು-ಶಿಷ್ಯ ಪರಂಪರೆ, ಭಾರತೀಯ ಸಂಸ್ಕೃತಿ ಹಾಗೂ ಜ್ಞಾನದ ಮಹತ್ವವನ್
गुरु-शिष्य (प्रतिकात्मक चित्र)।


ನವದೆಹಲಿ, ಜುಲೈ 29(ಹಿ.ಸ.):

ಆ್ಯಂಕರ್:

ಗುರು ಪೂರ್ಣಿಮೆಯ ಅಂಗವಾಗಿ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್, ಲೋಕಸಭಾಧ್ಯಕ್ಷ ಓಂ ಬಿರ್ಲಾ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ರಾಷ್ಟ್ರೀಯ ನಾಯಕರು ದೇಶದ ಜನತೆಗೆ ಶುಭಾಶಯ ಕೋರಿದ್ದು, ಗುರು-ಶಿಷ್ಯ ಪರಂಪರೆ, ಭಾರತೀಯ ಸಂಸ್ಕೃತಿ ಹಾಗೂ ಜ್ಞಾನದ ಮಹತ್ವವನ್ನು ಸ್ಮರಿಸಿದ್ದಾರೆ.

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು, ಭಾರತೀಯ ಸಂಸ್ಕೃತಿಯಲ್ಲಿ ಗುರುಗಳು ಜ್ಞಾನ, ಸಂಸ್ಕಾರ ಮತ್ತು ಸದಾಚಾರದ ದಾರಿದೀಪಗಳಾಗಿದ್ದು, ಸತ್ಯ, ಕರ್ತವ್ಯ ಮತ್ತು ಸೇವೆಯ ಮಾರ್ಗದಲ್ಲಿ ನಡೆಯಲು ಪ್ರೇರಣೆ ನೀಡುತ್ತಾರೆ ಎಂದು ಹೇಳಿದರು. ಜ್ಞಾನ, ವಿನಯ, ಉತ್ತಮ ಚಾರಿತ್ರ್ಯ ಹಾಗೂ ಸೇವಾ ಮನೋಭಾವದ ಮೂಲಕ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸುವಂತೆ ಕರೆ ನೀಡಿದರು.

ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರು, ಗುರು ಪೂರ್ಣಿಮೆಯು ಭಾರತೀಯ ಸಂಸ್ಕೃತಿಯ ಶಾಶ್ವತ ಚೇತನೆಯ ಹಬ್ಬವಾಗಿದ್ದು, ಗುರುಗಳು ಶಿಕ್ಷಣದ ಜೊತೆಗೆ ಬದುಕಿನ ಮೌಲ್ಯಗಳನ್ನು ಕಲಿಸುತ್ತಾರೆ ಎಂದು ಹೇಳಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕೇಂದ್ರ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಹಾಗೂ ಜೆ.ಪಿ. ನಡ್ಡಾ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಹಾಗೂ ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಸಹ ಗುರು ಪೂರ್ಣಿಮೆಯ ಶುಭಾಶಯಗಳನ್ನು ತಿಳಿಸಿ, ಗುರುಗಳ ತ್ಯಾಗ, ಮಾರ್ಗದರ್ಶನ ಮತ್ತು ಸಮಾಜ ನಿರ್ಮಾಣದಲ್ಲಿನ ಕೊಡುಗೆಯನ್ನು ಕೊಂಡಾಡಿದರು.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande