ಆಗಸ್ಟ್ ಅಂತ್ಯಕ್ಕೆ ಬರ ಪರಿಸ್ಥಿತಿ ವರದಿ ಕೇಂದ್ರಕ್ಕೆ ಸಲ್ಲಿಕೆ: ಡಿಸಿಎಂ ಜಿ. ಪರಮೇಶ್ವರ್
ಬೆಂಗಳೂರು, 29 ಜುಲೈ (ಹಿ.ಸ.): ಆ್ಯಂಕರ್: ರಾಜ್ಯದಲ್ಲಿ ತಲೆದೂರಿರುವ ಬರ ಪರಿಸ್ಥಿತಿ ಹಾಗೂ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾದ ವರದಿಯ ಕುರಿತು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಬರ ಸ್ಥಿತಿಗತಿಗಳ ಬಗ್ಗೆ
Parameshwara


ಬೆಂಗಳೂರು, 29 ಜುಲೈ (ಹಿ.ಸ.):

ಆ್ಯಂಕರ್:

ರಾಜ್ಯದಲ್ಲಿ ತಲೆದೂರಿರುವ ಬರ ಪರಿಸ್ಥಿತಿ ಹಾಗೂ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾದ ವರದಿಯ ಕುರಿತು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಬರ ಸ್ಥಿತಿಗತಿಗಳ ಬಗ್ಗೆ ವಿವರಣೆ ನೀಡಿದರು.

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗುವ ಮುನ್ಸೂಚನೆ ಇರುವುದರಿಂದ, ಆಗಸ್ಟ್ ಅಂತ್ಯದವರೆಗೆ ಮಳೆಯ ಪರಿಸ್ಥಿತಿಯನ್ನು ಅಧ್ಯಯನ ಮಾಡಿ ಕೇಂದ್ರ ಸರ್ಕಾರಕ್ಕೆ ಅಧಿಕೃತ ವರದಿ ಸಲ್ಲಿಸಲಾಗುತ್ತದೆ ಎಂದು ಪರಮೇಶ್ವರ್ ತಿಳಿಸಿದರು.

ಆಗಸ್ಟ್ ಕೊನೆಯ ವಾರದಲ್ಲಿ ವರದಿ ನೀಡಲಾಗುತ್ತದೆ, ಬಳಿಕ ಸೆಪ್ಟೆಂಬರ್ ನಲ್ಲಿ ಕೇಂದ್ರದ ಉನ್ನತ ಮಟ್ಟದ ತಂಡ ರಾಜ್ಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ ಎಂದರು.

ಬರಪೀಡಿತ ಪ್ರದೇಶಗಳನ್ನು ಅಧಿಕೃತವಾಗಿ ಘೋಷಿಸಲು ಕೇಂದ್ರ ಸರ್ಕಾರ ಕೆಲವು ಕಠಿಣ ನಿಯಮ ಹಾಗೂ ಮಾನದಂಡಗಳನ್ನು ವಿಧಿಸಿದೆ. ಈ ಮಾನದಂಡಗಳನ್ನು ಸ್ವಲ್ಪ ಸಡಿಲಗೊಳಿಸುವಂತೆ ಕೇಂದ್ರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದು ಡಿಸಿಎಂ ಸ್ಪಷ್ಟಪಡಿಸಿದರು.

ಒಮ್ಮೆ ನಿಯಮಗಳನ್ನು ಸಡಿಲಗೊಳಿಸಿದರೆ, ಉತ್ತರ ಕರ್ನಾಟಕದ ಹಲವು ತಾಲೂಕುಗಳಲ್ಲಿ ಶೇ. 80ರಷ್ಟು ಮಳೆ ಕೊರತೆಯಾಗಿರುವುದನ್ನು ಗಮನದಲ್ಲಿಟ್ಟುಕೊಂಡು ತಕ್ಷಣವೇ ಬರಪೀಡಿತ ಪ್ರದೇಶಗಳೆಂದು ಘೋಷಿಸಲು ಅನುಕೂಲವಾಗುತ್ತದೆ ಎಂದು ಅವರು ತಿಳಿಸಿದರು.

ಸದ್ಯ ರಾಜ್ಯದಲ್ಲಿ ಎದುರಾಗಬಹುದಾದ ಗಂಭೀರ ಬರ ಪರಿಸ್ಥಿತಿಯ ಮುನ್ಸೂಚನೆಯನ್ನು ಮಾತ್ರ ಕೇಂದ್ರಕ್ಕೆ ನೀಡಲಾಗಿದೆ ಎಂದು ಅವರು ಸ್ಪಪಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande