ದಿ.ಚೆನ್ನಮ್ಮ ದೇವೇಗೌಡ 11ನೇ ದಿನದ ಕಾರ್ಯ: ಲಕ್ಷಾಂತರ ಜನರಿಗೆ ಪ್ರಸಾದದ ವ್ಯವಸ್ಥೆ, ಸಿದ್ಧತೆ ಪರಿಶೀಲಿಸಿದ ಹೆಚ್.ಡಿ. ಕುಮಾರಸ್ವಾಮಿ
ಹಾಸನ, 29 ಜುಲೈ (ಹಿ.ಸ.): ಆ್ಯಂಕರ್: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಪತ್ನಿ ದಿವಂಗತೇಂ ಚೆನ್ನಮ್ಮ ಅವರ 11ನೇ ದಿನದ ಪುಣ್ಯತಿಥಿ ಕಾರ್ಯಕ್ಕೆ ಸಿದ್ಧತೆಗಳನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪರಿಶೀಲಿಸಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ತಾಯಿಯವರು ತಮ್ಮ ಜೀ
HD Kumaraswamy Emotional Statement in Hassan


ಹಾಸನ, 29 ಜುಲೈ (ಹಿ.ಸ.):

ಆ್ಯಂಕರ್: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಪತ್ನಿ ದಿವಂಗತೇಂ ಚೆನ್ನಮ್ಮ ಅವರ 11ನೇ ದಿನದ ಪುಣ್ಯತಿಥಿ ಕಾರ್ಯಕ್ಕೆ ಸಿದ್ಧತೆಗಳನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪರಿಶೀಲಿಸಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,

ನಮ್ಮ ತಾಯಿಯವರು ತಮ್ಮ ಜೀವಿತಾವಧಿಯಲ್ಲಿ ಲಕ್ಷಾಂತರ ಕುಟುಂಬಗಳ ನೆರವಿಗೆ ನಿಂತಿದ್ದರು. ಹೀಗಾಗಿ ನಾಳಿನ ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿ ಅಭಿಮಾನಿಗಳು ಹಾಗೂ ಸಾರ್ವಜನಿಕರು ಆಗಮಿಸಲಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದರು.

ಲಕ್ಷಾಂತರ ಜನರಿಗೆ ಪ್ರಸಾದ ವಿನಿಯೋಗ ವ್ಯವಸ್ಥೆ

ಬರುವ ಹಿತೈಷಿಗಳು ಹಾಗೂ ಅಭಿಮಾನಿಗಳಿಗೆ ಯಾವುದೇ ತೊಂದರೆಯಾಗದಂತೆ ಸಕಲ ಮುನ್ನೆಚ್ಚರಿಕೆ ವಹಿಸಲಾಗಿದೆ. ಬಂದಂತಹ ಲಕ್ಷಾಂತರ ಜನರಿಗೆ ಯಾವುದೇ ಅಡಚಣೆಯಾಗದಂತೆ ಸಮಾಧಿ ದರ್ಶನ, ಪೂಜೆ ಹಾಗೂ ಪ್ರಸಾದ ವಿನಿಯೋಗಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದರು.

ಇದಕ್ಕಾಗಿ 5-6 ಪ್ರತ್ಯೇಕ ತಂಡಗಳಿಗೆ ಪ್ರಸಾದ ತಯಾರಿಸುವ ಜವಾಬ್ದಾರಿ ನೀಡಲಾಗಿದೆ. ತಾಯಿ ಜೀವಂತವಿದ್ದಾಗ ಹೇಗೆ ಮನೆಗೆ ಬಂದವರಿಗೆ ಊಟ ಉಪಚಾರ ಮಾಡಿ ಕಳುಹಿಸುತ್ತಿದ್ದರೋ, ಅದೇ ಪರಂಪರೆಯನ್ನು ಇಂದಿಗೂ ಮುಂದುವರಿಸುತ್ತಿದ್ದೇವೆ ಎಂದು ಅವರು ಭಾವುಕರಾದರು.

ನಾಳೆ ಬೆಳಗ್ಗೆ 10 ಗಂಟೆಗೆ ಪೂಜಾ ವಿಧಿವಿಧಾನಗಳು ಆರಂಭಗೊಂಡು 11 ಗಂಟೆಯ ವೇಳೆಗೆ ಪೂರ್ಣಗೊಳ್ಳಲಿವೆ. ಬಳಿಕ ಬೆಳಗ್ಗೆಯಿಂದ ಸಂಜೆಯವರೆಗೆ ಆಗಮಿಸುವ ಎಲ್ಲ ಅಭಿಮಾನಿಗಳು ಹಾಗೂ ಗಣ್ಯಾತಿಗಣ್ಯರು, ಪಕ್ಷದ ಮುಖಂಡರು, ಶಾಸಕರು ಮತ್ತು ಸಚಿವರು ಆಗಮಿಸಿ ಅಂತಿಮ ನಮನ ಸಲ್ಲಿಸಿ ಪ್ರಸಾದ ಸ್ವೀಕರಿಸಬಹುದು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / NAVEEN PARADESHII


 rajesh pande