
ಬೆಂಗಳೂರು, 29 ಜುಲೈ (ಹಿ.ಸ.):
ಆ್ಯಂಕರ್:
ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶವನ್ನು ವಿರೋಧಿಸಿ ರಾಜ್ಯದಲ್ಲಿ ಕಾವೇರಿ ಕಿಚ್ಚು ತೀವ್ರಗೊಂಡಿದೆ. ಕಾವೇರಿ ಜಲಾನಯನ ಪರದೇಶದಲ್ಲಿ ಹೋರಾಟದ ಕಾವೂ ಜೋರಾಗಿದೆ, ಬೆಂಗಳೂರು ಸೇರಿದಂತೆ ಮಂಡ್ಯ ಮೈಸೂರು ಭಾಗದಲ್ಲಿ ಹೋರಾಟಗಳು ಆರಂಭವಾಗಿವೆ.
ಇತ್ತ ರಾಮನಗರ ಹಾಗೂ ಚನ್ನಪಟ್ಟಣದಲ್ಲೂ ತಮಿಳುನಾಡು ಮುಖ್ಯಮಂತ್ರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಚನ್ನಪಟ್ಟಣದ ಶಿವಾನಂದ ಚಿತ್ರಮಂದಿರದ ಎದುರು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿ, ತಮಿಳುನಾಡಿಗೆ ನೀರು ಹರಿಸುವುದನ್ನು ಕೂಡಲೇ ನಿಲ್ಲಿಸಬೇಕು ಮತ್ತು ರಾಜ್ಯ ಸರ್ಕಾರ ಕೂಡಲೇ ಮರುಪರಿಶೀಲನಾ ಅರ್ಜಿ ಸಲ್ಲಿಸಬೇಕು ಎಂದು ಆಗ್ರಹಿಸಿವೆ.
ರಾಜ್ಯದ ಜಲಾಶಯಗಳಲ್ಲಿ ನೀರಿಲ್ಲದಿರುವಾಗ ಪಕ್ಕದ ರಾಜ್ಯಕ್ಕೆ ನೀರು ಬಿಡುವುದು ಎಷ್ಟು ಸರಿ? ಎಂದು ಪ್ರಶ್ನಿಸಿರುವ ಕರವೇ ಮುಖಂಡರು, ರಾಜಕೀಯ ಹಿತಾಸಕ್ತಿಗಾಗಿ ರಾಜ್ಯದ ಹಿತವನ್ನು ಬಲಿ ಕೊಡಬೇಡಿ ಎಂದು ಸರ್ಕಾರವನ್ನು ಎಚ್ಚರಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / NAVEEN PARADESHII