
ನವದೆಹಲಿ, 03 ಜುಲೈ (ಹಿ.ಸ.):
ಆ್ಯಂಕರ್:ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರು ಜುಲೈ 6 ಮತ್ತು 7ರಂದು ಎರಡು ದಿನಗಳ ಜಮ್ಮು-ಕಾಶ್ಮೀರ ಪ್ರವಾಸ ಕೈಗೊಳ್ಳಲಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರಾದ ಬಳಿಕ ಅವರ ಇದು ಮೊದಲ ಜಮ್ಮು-ಕಾಶ್ಮೀರ ಭೇಟಿ ಆಗಿದೆ.
ಪಕ್ಷದ ಮೂಲಗಳ ಪ್ರಕಾರ, ಜುಲೈ 6ರಂದು ಜಮ್ಮುವಿಗೆ ಆಗಮಿಸುವ ನಿತಿನ್ ನವೀನ್ ಅವರು ಡಾ. ಶ್ಯಾಮಾ ಪ್ರಸಾದ್ ಮುಖರ್ಜಿ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಿರುವ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಪ್ರವಾಸದ ವೇಳೆ ಅವರು ಪಕ್ಷದ ಮುಖಂಡರು, ಶಾಸಕರು ಹಾಗೂ ಹಿರಿಯ ಪದಾಧಿಕಾರಿಗಳೊಂದಿಗೆ ಜಮ್ಮು-ಕಾಶ್ಮೀರದ ಪ್ರಸ್ತುತ ರಾಜಕೀಯ ಬೆಳವಣಿಗೆಗಳು, ಪಕ್ಷದ ಸಂಘಟನೆ ಮತ್ತು ಕಾರ್ಯಚಟುವಟಿಕೆಗಳ ಕುರಿತು ಸುದೀರ್ಘ ಚರ್ಚೆ ನಡೆಸಲಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಿಧ ಜನಕಲ್ಯಾಣ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿಯನ್ನು ಪಕ್ಷದ ಕಾರ್ಯಕರ್ತರೊಂದಿಗೆ ಪರಿಶೀಲಿಸಲಿದ್ದಾರೆ.
ಇದೇ ವೇಳೆ, ರಾಷ್ಟ್ರೀಯ ಅಧ್ಯಕ್ಷರು ಉಧಂಪುರ ಜಿಲ್ಲೆಗೂ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.