ಅರಣ್ಯ ಇಲಾಖೆ ಅಧಿಕಾರಿಗಳಿಂದಾಗಿರುವ ಅಕ್ರಮಗಳು ವಿರುದ್ದ ಸಮಗ್ರ ತನಿಖೆಗೆ
ಅರಣ್ಯ ಇಲಾಖೆ ಅಧಿಕಾರಿಗಳಿಂದಾಗಿರುವ ಅಕ್ರಮಗಳು ವಿರುದ್ದ ಸಮಗ್ರ ತನಿಖೆಗೆ
ಡಾ. ವೆಂಕಟಸ್ವಾಮಿ


ಕೋಲಾರ, ೦೩ ಜುಲೈ (ಹಿ.ಸ):

ಆಂಕರ್: ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಿಂದ ನಡೆದಿರುವ ಅಕ್ರಮಗಳ ಸಮಗ್ರ ತನಿಖೆಗೆ ಆಗ್ರಹಿಸಿ ಸಮತಾಸೈನಿಕ ದಳ ರಾಜ್ಯಾಧ್ಯಕ್ಷ ಡಾ.ಎಂ.ವೆ0ಕಟಸ್ವಾಮಿ ರಾಜ್ಯಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಜಿಲ್ಲೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಸೇರಿದಂತೆ ಇಲಾಖೆಯ ವಿವಿಧ ಅಧಿಕಾರಿಗಳು ನಡೆಸಿರುವ ಭ್ರಷ್ಟಾಚಾರ, ಸಂಬ0ಧಿಕರು, ಆಪ್ತರ ಹೆಸರಿನಲ್ಲಿ ಮಾಡಿರುವ ಅಪಾರ ಆಸ್ತಿಯ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

೧೯೮೦ ರ ಪೂರ್ವದಲ್ಲಿ ರೈತರಿಗೆ ಕಂದಾಯ ಇಲಾಖೆಯಿಂದ ಮಂಜೂರಾಗಿರುವ ಅರಣ್ಯ ಜಮೀನುಗಳ ಪ್ರಕರಣಗಳಲ್ಲಿ ಜಂಟಿ ಮೋಜಣಿ ಮಾಡಿ ಸರ್ಕಾರದ ಆದೇಶದ ಅನುಸಾರ ಮಂಜೂರಾದ ರೈತರಿಗೆ ಸದರಿ ಜಮೀನುಗಳನ್ನು ನಿಯಮಾನುಸಾರ ಬಿಟ್ಟುಕೊಡಲು ಅರಣ್ಯ ಇಲಾಖೆ ತ್ವರಿತವಾಗಿ ಕ್ರಮವಹಿಸಬೇಕು. ಅರಣ್ಯ ಭೂಮಿಗಳ ಕ್ರೋಢೀಕೃತ ದಾಖಲೆಯಂತೆ ಸರ್ಕಾರದ ಮಟ್ಟದಲ್ಲಿ ಈಗಾಗಲೆ ಎಸ್.ಐ.ಟಿ ವಿಶೇಷ ತನಿಖಾ ತಂಡವನ್ನು ರಚಿಸಿದ್ದುಇದರ ಸಂಬAಧ ಅರಣ್ಯ ಪ್ರಕರಣಗಳಿಗೆ ಸಂಬAಧಿಸಿದAತೆ ಸರ್ಕಾರದ ಮಟ್ಟದಲ್ಲಿ ಅಂತಿಮ ತೀರ್ಮಾನ ಆಗುವವರೆಗೆ ರೈತರನ್ನು ಒಕ್ಕಲೆಬ್ಬಿಸಬಾರದು ಎಂದು ಒತ್ತಾಯಿಸಿದ್ದಾರೆ.

ಶ್ರೀನಿವಾಸಪುರ ವಲಯ ಅರಣ್ಯಾಧಿಕಾರಿ ಮಹೇಶ್ ಅವರು, ಹೊರಗುತ್ತಿಗೆಯಲ್ಲಿ ಶ್ರೀನಿವಾಸಪುರ ವಲಯದಲ್ಲಿ ವಾಹನ ಚಾಲಕನಾಗಿ ನೇಮಕ ಮಾಡಿಕೊಂಡಿರುವ ಭರತ್ಕುಮಾರ್ ರೆಡ್ಡಿ ಇವರನ್ನು ತನ್ನ ಮನೆಯ ಸ್ವಂತ ಕೆಲಸಗಳಿಗೆ ಬಳಸಿಕೊಂಡು ಸರ್ಕಾರಿ ವೇತವನ್ನು ಪಾವತಿಸಿ ಸರ್ಕಾರಿ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದು ಇದರ ಸಮಗ್ರ ತನಿಖೆಯಾಗಬೇಕು ಮತ್ತು ಭರತ್ಕುಮಾರ್ ರೆಡ್ಡಿ ವಾಹನ ಚಾಲಕ ಇವರನ್ನು ಹೊರಗುತ್ತಿಗೆ ಸೇವೆಯಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ರಘುರಾಮರೆಡ್ಡಿ ಅರಣ್ಯಗುತ್ತಿಗೆದಾರ, ಕಲ್ಲೂರು ಗ್ರಾಮ, ಶ್ರೀನಿವಾಸಪುರ ತಾಲ್ಲೂಕು ಇವರಿಂದ ಶ್ರೀನಿವಾಸಪುರ ಕೋಲಾರ ಮತ್ತು ಮಾಲೂರು ವಲಯಗಳಲ್ಲಿ ಅರಣ್ಯ ಒತ್ತುವರಿ ತೆರವು ಕಾಮಗಾರಿಗಳಿಗೆ ಸಂಬAಧಿಸಿದAತೆ ಸದರಿ ಗುತ್ತಿಗೆದಾರರನ್ನು ನಿಯಮಬಾಹಿರವಾಗಿ ಟೆಂಡರ್ಗಳಲ್ಲಿ ವಂಚನೆ ಮಾಡಿದ್ದರೂ, ಸುಮಾರು ೩೦ ರಿಂದ ೪೦ ಕೋಟಿ ರೂಗಳ ಹಣವನ್ನು ಸೆಳೆದು ದುರುಪಯೋಗ ಮಾಡಿಕೊಂಡು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿರುವ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಉಪ ಅರಣ್ಯ ಸಂರಕ್ಷಣಾಧಿಖಾರಿ ಸರೀನಾ ಸಿಕ್ಕಲಿಗಾರ್ ಅವರು, ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಯಡಿಯಲ್ಲಿ ಅರಣ್ಯದ ಅಂಚಿನಲ್ಲಿರುವ ಗ್ರಾಮಗಳ ಎಸ್.ಸಿ , ಎಸ್.ಟಿ ಫಲಾನುಭವಿಗಳ ಕುಟುಂಬಗಳಿಗೆ ಸಂದಾಯವಾಗಬೇಕಾದ ಹಣವನ್ನು ಗ್ಯಾಸ್ ಏಜನ್ಸಿಗಳ ಮೂಲಕ ಸರ್ಕಾರಕ್ಕೆ ವಂಚಿಸಿ ಹಣ ದುರುಪಯೋಗ ಮಾಡಿಕೊಂಡಿರುವ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಸರೀನಾ ಸಿಕ್ಕಲಿಗಾರ್ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹೇಶ್ ಅವರು ಸರ್ಕಾರದ ಯೋಜನೆಯಾದ ನಗರವನ ಕಾಮಗಾರಿಯನ್ನು ಕೋಲಾರ ಮತ್ತು ಬಂಗಾರಪೇಟೆ ವಲಯಗಳಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಂದರೆ ನಗರ ವ್ಯಾಪ್ತಿಯಲ್ಲಿಯೇ ನಿರ್ಮಾಣ ಮಾಡಬೇಕಾದ ಕಾಮಗಾರಿಗಳನ್ನು ನಗರ ಹೊರವಲಯಗಳಲ್ಲಿ ನಿರ್ಮಾಣ ಮಾಡಿ ಸರ್ಕಾರದ ಹಣವನ್ನು ದುರುಪಯೋಗ ಪಡಿಸಿಕೊಂಡಿರುತ್ತಾರೆ. ಸರ್ಕಾರದ ಅನುದಾನವನ್ನು ಲಪಟಾಯಿಸಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿರುವ ಬಗ್ಗೆ ಕೇಂದ್ರ ಸರ್ಕಾರದ ಸಿ.ಇ.ಸಿ ವತಿಯಿಂದ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande