ಕೋಲಾರದಲ್ಲಿ ಮನೆಮನೆಗೆ ತೆರಳಿ ಗಣತಿ ಕಾರ್ಯ ನಡೆಸಲು ಜಿಲ್ಲಾಧಿಕಾರಿಗಳ ಸೂಚನೆ
ಕೋಲಾರದಲ್ಲಿ ಮನೆಮನೆಗೆ ತೆರಳಿ ಗಣತಿ ಕಾರ್ಯ ನಡೆಸಲು ಜಿಲ್ಲಾಧಿಕಾರಿಗಳ ಸೂಚನೆ
ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ


ಕೋಲಾರ : ಜುಲೈ ೩ (ಹಿ.ಸ)

ಆಂಕರ್ : ಜಿಲ್ಲೆಯಲ್ಲಿ ನಡೆಯುತ್ತಿರುವ ಎಸ್ ಐ ಆರ್ ಕಾರ್ಯದ ಸಂಬAಧ ಮನೆಮನೆಗೆ ಭೇಟಿ ನೀಡಿ ಮಾಹಿತಿ ಕಲೆಹಾಕುವಂತೆ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಬಿಎಲ್ಒಗಳಿಗೆ (ಃಐಔ) ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.ಚುನಾವಣಾ ಆಯೋಗದ ಆದೇಶದಂತೆ ಪ್ರತಿ ಮನೆಗೂ ತೆರಳಿ ನಿಗದಿತ ಗಣತಿ ನಮೂನೆಗಳನ್ನು ವಿತರಿಸಿ, ಸಂಬAಧಪಟ್ಟವರಿAದ ಸಹಿ ಪಡೆಯುವುದು ಕಡ್ಡಾಯವಾಗಿದೆ ಎಂದು ಕೋಲಾರ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಸೂಚಿಸಿದ್ದಾರೆ.

ಗಣತಿ ಕಾರ್ಯದ ನೆಪದಲ್ಲಿ ಬಿಎಲ್ಒಗಳು ಮತದಾರರನ್ನು ಸಾರ್ವಜನಿಕ ಸ್ಥಳಗಳಲ್ಲಿ ಅಥವಾ ಒಂದು ಕಡೆ ಗುಂಪುಗೂಡಿಸಿ ಗಣತಿ ನಮೂನೆಗಳನ್ನು ಭರ್ತಿ ಮಾಡಿಸುತ್ತಿರುವ ಪ್ರಕರಣಗಳು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಈ ರೀತಿಯ ಕಾರ್ಯವೈಖರಿಯನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಧಿಕಾರಿಗಳು, ಇನ್ನುಮುಂದೆ ಇಂತಹ ಲೋಪಗಳು ಮರುಕಳಿಸದಂತೆ ಎಚ್ಚರಿಕೆ ನೀಡಿದ್ದಾರೆ. ಪ್ರತಿ ಬಿಎಲ್ಒಗಳು ಕಡ್ಡಾಯವಾಗಿ ಮನೆಮನೆಗೆ ಭೇಟಿ ನೀಡಿ, ಗಣತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿದ್ದಾರೆ.

ಈ ಪ್ರಕ್ರಿಯೆಯು ಸಮರ್ಪಕವಾಗಿ ನಡೆಯುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಮೇಲ್ವಿಚಾರಕರು ನಿರಂತರ ನಿಗಾ ವಹಿಸಬೇಕು. ಒಂದು ವೇಳೆ ಕರ್ತವ್ಯ ಲೋಪ ಎಸಗುವುದು ಅಥವಾ ನಿರ್ಲಕ್ಷ್ಯ ವಹಿಸುವುದು ಕಂಡುಬAದಲ್ಲಿ, ಅಂತಹ ಬಿಎಲ್ಒಗಳ ಹಾಗೂ ಮೇಲ್ವಿಚಾರಕರು ವಿರುದ್ಧ ಕಾನೂನು ರೀತಿಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಸಿದ್ದಾರೆ.

ಅಲ್ಲದೆ, ಮತದಾರರಿಗೆ ಗಣತಿ ಫಾರ್ಮ್ ತುಂಬುವ ಪ್ರಕ್ರಿಯೆಗೆ ಸಂಬAಧಿಸಿದAತೆ ಯಾವುದೇ ಸಹಾಯ ಅಥವಾ ಮಾಹಿತಿ ಅಗತ್ಯವಿದ್ದಲ್ಲಿ, ಈಗಾಗಲೇ ಆಯಾ ಮತಗಟ್ಟೆಗಳಲ್ಲಿ ಸ್ಥಾಪಿಸಲಾಗಿರುವ ಫೆಸಿಲಿಟೇಶನ್ ಸೆಂಟರ್ಗಳಲ್ಲಿರುವ ಅಧಿಕಾರಿಗಳನ್ನು ಭೇಟಿ ಮಾಡಿ ಅಗತ್ಯ ನೆರವು ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande