
ನವದೆಹಲಿ, 03 ಜುಲೈ (ಹಿ.ಸ.):
ಆ್ಯಂಕರ್:ದೆಹಲಿಯ ಜಂತರ್-ಮಂತರ್‌ನಲ್ಲಿ ಕಳೆದ ಆರು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಹೋರಾಟಗಾರ ಸೋನಂ ವಾಂಗ್‌ಚುಕ್ ಅವರಿಗೆ ಬೆಂಬಲ ಸೂಚಿಸಿ, ಸಾಮಾಜಿಕ ಜಾಲತಾಣ ಆಧಾರಿತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಬೆಂಬಲಿಗರು ಶುಕ್ರವಾರ ಒಂದು ದಿನದ ಉಪವಾಸ ಆಚರಿಸಿದರು.
ಸಿಜೆಪಿ ಮುಖ್ಯಸ್ಥ ಅಭಿಜೀತ್ ದೀಪಕೆ ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ನೀಡಿ, ನಮ್ಮ ತಂಡ ಇಂದು ಸೋನಂ ವಾಂಗ್‌ಚುಕ್ ಅವರಿಗೆ ಬೆಂಬಲವಾಗಿ ಉಪವಾಸ ಮಾಡುತ್ತಿದೆ. ಅವರ ಆರೋಗ್ಯ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಇಂತಹ ಸಂದರ್ಭದಲ್ಲಿ ಎಲ್ಲರ ಒಗ್ಗಟ್ಟಿನ ಬೆಂಬಲ ಅತ್ಯಗತ್ಯ. ನೀವು ಕೂಡ ಈ ಒಂದು ದಿನದ ಉಪವಾಸದಲ್ಲಿ ಭಾಗವಹಿಸುತ್ತಿದ್ದರೆ, ಅವರಿಗೆ ಧೈರ್ಯ ತುಂಬುವ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಿ ಎಂದು ಮನವಿ ಮಾಡಿದರು.
ವಾಂಗ್‌ಚುಕ್ ಅವರ ಆರೋಗ್ಯ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಹಾಗೂ ಲಡಾಖ್‌ನ ಜನರು ಇಂದು ಸಾಮೂಹಿಕವಾಗಿ ಐಕ್ಯತೆ ಪ್ರದರ್ಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಜೆಪಿ ತಂಡ ಮತ್ತು ಬೆಂಬಲಿಗರು ಒಂದು ದಿನದ ಉಪವಾಸ ಕೈಗೊಂಡಿದ್ದಾರೆ ಎಂದು ದೀಪಕೆ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.