ಚಿನ್ನದ ಬೆಲೆ ಏರಿಕೆ; ಬೆಳ್ಳಿಯ ದರ ಯಥಾಸ್ಥಿತಿ
ನವದೆಹಲಿ, ಜುಲೈ 31(ಹಿ.ಸ.): ಆ್ಯಂಕರ್:ದೇಶೀಯ ಚಿನ್ನಾಭರಣ ಮಾರುಕಟ್ಟೆಯಲ್ಲಿ ಶುಕ್ರವಾರ ಚಿನ್ನದ ದರ ಏರಿಕೆಯಾಗಿದ್ದು, ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ದೇಶದ ಪ್ರಮುಖ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹770ರಿಂದ ₹840ರವರೆಗೆ ಏರಿಕೆಯಾಗಿ ₹1,44,340
प्रतीकात्मक


ನವದೆಹಲಿ, ಜುಲೈ 31(ಹಿ.ಸ.):

ಆ್ಯಂಕರ್:ದೇಶೀಯ ಚಿನ್ನಾಭರಣ ಮಾರುಕಟ್ಟೆಯಲ್ಲಿ ಶುಕ್ರವಾರ ಚಿನ್ನದ ದರ ಏರಿಕೆಯಾಗಿದ್ದು, ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ.

ದೇಶದ ಪ್ರಮುಖ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹770ರಿಂದ ₹840ರವರೆಗೆ ಏರಿಕೆಯಾಗಿ ₹1,44,340ರಿಂದ ₹1,44,490ರ ನಡುವೆ ವಹಿವಾಟಾಗಿದೆ. 22 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ ₹1,32,310ರಿಂದ ₹1,32,460ರ ನಡುವೆ ದಾಖಲಾಗಿದೆ.

ಬೆಳ್ಳಿಯ ದರದಲ್ಲಿ ಯಾವುದೇ ಬದಲಾವಣೆ ಇಲ್ಲದ ಕಾರಣ ದೆಹಲಿ ಮಾರುಕಟ್ಟೆಯಲ್ಲಿ ಪ್ರತಿ ಕೆ.ಜಿ. ಬೆಳ್ಳಿ ₹2,34,900ಕ್ಕೆ ಮಾರಾಟವಾಗುತ್ತಿದೆ.

ಬೆಂಗಳೂರು ಸೇರಿದಂತೆ ಹೈದರಾಬಾದ್ ಮತ್ತು ಭುವನೇಶ್ವರ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ₹1,44,340 ಹಾಗೂ 22 ಕ್ಯಾರೆಟ್ ಚಿನ್ನದ ದರ ₹1,32,310ರ ಮಟ್ಟದಲ್ಲಿ ವಹಿವಾಟಾಗಿದೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande