


ಕೊಪ್ಪಳ, 06 ಜುಲೈ (ಹಿ.ಸ.)
ಆ್ಯಂಕರ್ : ಹಸಿರು ಕ್ರಾಂತಿಯ ಹರಿಕಾರರು ಹಾಗೂ ಮಾಜಿ ಉಪಪ್ರಧಾನ ಮಂತ್ರಿಗಳಾದ ದಿ. ಡಾ. ಬಾಬು ಜಗಜೀವನ ರಾಮ್ ರವರ ಪುಣ್ಯ ಸ್ಮರಣೆ ನಿಮಿತ್ತ ಕೊಪ್ಪಳ ಜಿಲ್ಲಾಡಳಿತದಿಂದ ಸೋಮವಾರದಂದು ಗೌರವ ಸಮರ್ಪಣೆ ಮಾಡಲಾಯಿತು.
ಕೊಪ್ಪಳ ನಗರದ ಹೊಸಪೇಟೆ ರಸ್ತೆಯ ಶಿವಶಾಂತವೀರ ನಗರದ ನಿಜಶರಣ ಅಂಬಿಗರ ಚೌಡಯ್ಯ ಉದ್ಯಾನದಲ್ಲಿರುವ ಮಹನೀಯರ (ಡಾ. ಬಿ.ಆರ್. ಅಂಬೇಡ್ಕರ್, ಬಸವೇಶ್ವರ ಹಾಗೂ ಡಾ. ಬಾಬು ಜಗಜೀವನ ರಾಂ) ಪುತ್ಥಳಿಗೆ ಕೊಪ್ಪಳ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ. ರಾಮ್ ಎಲ್. ಅರಸಿದ್ದಿ ಅವರು ಸೇರಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಅಜ್ಜಪ್ಪ ಸೊಗಲದ, ಕೊಪ್ಪಳ ತಹಶಿಲ್ದಾರರಾದ ಬಸವರಾಜ ತನ್ನಳ್ಳಿ, ಜಿಲ್ಲಾ ವಾರ್ತಾಧಿಕಾರಿಗಳಾದ ಗವಿಸಿದ್ದಪ್ಪ ಹೊಸಮನಿ ಸೇರಿದಂತೆ ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್