ಹಣ ಹಾಗೂ ಮೊಬೈಲ್ ವಿಚಾರಕ್ಕೆ ಸ್ನೇಹಿತನ ಬರ್ಬರ ಹತ್ಯೆ: ಸ್ಕ್ರೂ ಡ್ರೈವರ್ನಿಂದ ತಲೆಗೆ ಇರಿದು ಕೊಲೆ, ಆರೋಪಿ ವಶಕ್ಕೆ
ವಿಜಯಪುರ, 06 ಜುಲೈ (ಹಿ.ಸ.) ಆ್ಯಂಕರ್ : ಹಣ ಹಾಗೂ ಮೊಬೈಲ್ ಫೋನ್ ನೀಡುವಂತೆ ನಿರಂತರವಾಗಿ ಒತ್ತಾಯ ಮಾಡುತ್ತಿದ್ದ ತನ್ನ ಸ್ನೇಹಿತನನ್ನು ಮದ್ಯದ ಅಮಲಿನಲ್ಲಿ ಸ್ಕ್ರೂ ಡ್ರೈವರ್ನಿಂದ ತಲೆಗೆ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ವಿಜಯಪುರ ನಗರದ ಬೆಂಡಿಗೇರಿ ಗಲ್ಲಿಯಲ್ಲಿ ನಡೆದಿದೆ. ಈ ಘಟನೆ ನಗರದ
ಹಣ ಹಾಗೂ ಮೊಬೈಲ್ ವಿಚಾರಕ್ಕೆ ಸ್ನೇಹಿತನ ಬರ್ಬರ ಹತ್ಯೆ: ಸ್ಕ್ರೂ ಡ್ರೈವರ್ನಿಂದ ತಲೆಗೆ ಇರಿದು ಕೊಲೆ, ಆರೋಪಿ ವಶಕ್ಕೆ


ವಿಜಯಪುರ, 06 ಜುಲೈ (ಹಿ.ಸ.)

ಆ್ಯಂಕರ್ : ಹಣ ಹಾಗೂ ಮೊಬೈಲ್ ಫೋನ್ ನೀಡುವಂತೆ ನಿರಂತರವಾಗಿ ಒತ್ತಾಯ ಮಾಡುತ್ತಿದ್ದ ತನ್ನ ಸ್ನೇಹಿತನನ್ನು ಮದ್ಯದ ಅಮಲಿನಲ್ಲಿ ಸ್ಕ್ರೂ ಡ್ರೈವರ್ನಿಂದ ತಲೆಗೆ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ವಿಜಯಪುರ ನಗರದ ಬೆಂಡಿಗೇರಿ ಗಲ್ಲಿಯಲ್ಲಿ ನಡೆದಿದೆ. ಈ ಘಟನೆ ನಗರದಲ್ಲಿ ಆತಂಕ ಮೂಡಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಹತ್ಯೆಯಾದ ವ್ಯಕ್ತಿಯನ್ನು ಉಮರಸಾಬ್ ಪಟೇಲ್ (36) ಎಂದು ಗುರುತಿಸಲಾಗಿದೆ. ಆರೋಪಿ ನಬೀರಸೂಲ ಹೊಟಗಿ ತನ್ನ ಮನೆಯಲ್ಲಿ ಉಮರಸಾಬ್ನೊಂದಿಗೆ ಸೇರಿ ಮದ್ಯಪಾನ ಮಾಡಿದ್ದನು. ಮದ್ಯದ ಅಮಲಿನಲ್ಲಿದ್ದ ವೇಳೆ ಇಬ್ಬರ ನಡುವೆ ಹಣ ಹಾಗೂ ಮೊಬೈಲ್ ಫೋನ್ ವಿಚಾರವಾಗಿ ಮಾತಿನ ಚಕಮಕಿ ನಡೆದಿದ್ದು, ಅದು ತೀವ್ರ ವಾಗ್ವಾದಕ್ಕೆ ತಿರುಗಿದೆ.

ಮೃತ ಉಮರಸಾಬ್ ಪದೇಪದೇ ಹಣ ಮತ್ತು ಮೊಬೈಲ್ ನೀಡುವಂತೆ ಒತ್ತಾಯ ಮಾಡುತ್ತಿದ್ದಾನೆ ಎನ್ನಲಾಗಿದ್ದು, ಇದರಿಂದ ಕೋಪಗೊಂಡ ನಬೀರಸೂಲ ಮನೆಯಲ್ಲಿದ್ದ ಸ್ಕ್ರೂ ಡ್ರೈವರ್ನ್ನು ತೆಗೆದುಕೊಂಡು ಉಮರಸಾಬ್ ತಲೆಗೆ ಹಲವು ಬಾರಿ ಇರಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ಉಮರಸಾಬ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಗೋಳಗುಮ್ಮಟ್ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಸ್ಥಳದಲ್ಲಿದ್ದ ಸಾಕ್ಷ್ಯಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಮುಂದುವರಿದಿದೆ. ಘಟನೆಯ ನಿಖರ ಕಾರಣ ಹಾಗೂ ಇತರ ಅಂಶಗಳ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande