
ಹೊಸಪೇಟೆ, 06 ಜುಲೈ (ಹಿ.ಸ.)
ಆ್ಯಂಕರ್ : ಕನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ‘ಸರ್ವ ಸದಸ್ಯರ ಮಹಾಸಭೆ’ ದಿನಾಂಕ : 08.07.2026 ರ ಬುಧವಾರ ಸಂಜೆ : 6:00 ಗಂಟೆಗೆ ರೋಟರಿ ಕ್ಲಬ್ ಸ್ಟೇಷನ್ ರಸ್ತೆ, ಹೊಸಪೇಟೆಯಲ್ಲಿ ಜಿಲ್ಲಾಧ್ಯಕ್ಷರಾದ ಜಿ. ಮಲ್ಲಿಕಾರ್ಜುನಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಬೆಂಗಳೂರಿನ ದಿನಾಂಕ : 11.07.2026 ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ನೂತನ ಮುಖ್ಯಮಂತ್ರಿಗಳಿಗೆ ಹಾಗೂ ಉಪ-ಮುಖ್ಯಮಂತ್ರಿಗಳಿಗೆ `ನಮ್ಮ ಅಭಿಮಾನದ ಅಭಿನಂದನೆ’ ಹಮ್ಮಿಕೊಳ್ಳಲಾಗಿದೆ.
ಈ ಸಮಾರಂಭದಲ್ಲಿ ಸರ್ಕಾರಿ ನೌಕರರಿಗೆ ಮಾರಕವಾಗಿರುವ ಎನ್.ಪಿ.ಎಸ್. ರದ್ದುಗೊಳಿಸಿ ಓ.ಪಿ.ಎಸ್.ಜಾರಿಗೆ ಹಕ್ಕೊತ್ತಾಯವನ್ನು ಮಾಡಲಾಗುತ್ತದೆ. ಅಲ್ಲದೇ ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ ಪರಿಣಾಮಕಾರಿ ಅನುಷ್ಠಾನಕ್ಕೆ ಒತ್ತಾಯಿಸಲಾಗುತ್ತದೆ.
ಈ ಹಿನ್ನಲೆಯಲ್ಲಿ ವಿಜಯನಗರ ಜಿಲ್ಲೆಯ ಸರ್ಕಾರಿ ನೌಕರರ ಸಂಘದ ಸರ್ವ ಸದಸ್ಯರ ಸಭೆ ಏರ್ಪಡಿಸಲಾಗಿದ್ದು, ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಸಭೆಗೆ ಹಾಜರಾಗಬೇಕು ಎಂದು ಜಿಲ್ಲಾಧ್ಯಕ್ಷರಾದ ಜಿ. ಮಲ್ಲಿಕಾರ್ಜುನಗೌಡ ಅವರು ಕೋರಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್