ಒಬಿಸಿ ಸಮುದಾಯದ ಹಕ್ಕುಗಳ ರಕ್ಷಣೆಗಾಗಿ ಬಿಜೆಪಿ ನಿರಂತರ ಹೋರಾಟ : ಎನ್. ರವಿಕುಮಾರ್
ಬಳ್ಳಾರಿ, 08 ಜುಲೈ (ಹಿ.ಸ.) ಆ್ಯಂಕರ್ : ಕರ್ನಾಟಕ ಸರ್ಕಾರ ನಡೆಸಿರುವ ಸಾಮಾಜಿಕ-ಆರ್ಥಿಕ ಸಮೀಕ್ಷೆಯಲ್ಲಿ 4.24 ಲಕ್ಷ ಕುಟುಂಬಗಳು ಭಾಗವಹಿಸಿಲ್ಲ ಎಂದು ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಎನ್. ರವಿಕುಮಾರ್ ಅವರು ಆರೋಪಿಸಿದ್ದಾರೆ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಬುಧವಾರ ಮಾತ
BJP continuously fights for the protection of the rights of OBC community


BJP continuously fights for the protection of the rights of OBC community


BJP continuously fights for the protection of the rights of OBC community


ಬಳ್ಳಾರಿ, 08 ಜುಲೈ (ಹಿ.ಸ.)

ಆ್ಯಂಕರ್ : ಕರ್ನಾಟಕ ಸರ್ಕಾರ ನಡೆಸಿರುವ ಸಾಮಾಜಿಕ-ಆರ್ಥಿಕ ಸಮೀಕ್ಷೆಯಲ್ಲಿ 4.24 ಲಕ್ಷ ಕುಟುಂಬಗಳು ಭಾಗವಹಿಸಿಲ್ಲ ಎಂದು ವಿಧಾನಪರಿಷತ್ತಿನ

ವಿರೋಧ ಪಕ್ಷದ ನಾಯಕ ಎನ್. ರವಿಕುಮಾರ್ ಅವರು ಆರೋಪಿಸಿದ್ದಾರೆ.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ಕಾಂತರಾಜ್ ವರದಿ ಮೂಲೆಗುಂಪಾಗಿದೆ. ಮಧುಸೂಧನ್ ನೇತೃತ್ವದ ಸಮಿತಿಯ ವರದಿಯನ್ನು ಬಹಿರಂಗಪಡಿಸಬಾರದು ಎಂದು ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಇಂಥಹಾ ಸಂದರ್ಭದಲ್ಲಿ ಸರ್ಕಾರ ಯಾವ ಆಧಾರದ ಮೇಲೆ ಈ ವರದಿಗಳ ಆಧಾರದ ಮೇಲೆ ಸೌಲಭ್ಯಗಳನ್ನು ನೀಡಲಾಗುತ್ತದೆ ಎಂದು ಹೇಳುತ್ತಲೇ ಕಾಲಹರಣ ಮಾಡುತ್ತಿದೆ. ಅಲ್ಲದೇ, ಹಿಂದುಳಿದ ವರ್ಗಗಳ ವಂಚನೆ ಮಾಡುತ್ತಿದೆ ಎಂದು ಆರೋಪಿಸಿದರು.

ಕರ್ನಾಟಕ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ಪಕ್ಷವು ಅಹಿಂದ ವರ್ಗವನ್ನು, ಅದರಲ್ಲೂ ಹಿಂದುಳಿದ ವರ್ಗಗಳನ್ನು ಸಂಪೂರ್ಣ ಕಡೆಗಣಿಸಿದೆ. `ಅಹಿಂದ' ಬಲದಿಂದಲೇ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈ ವರ್ಗಕ್ಕೆ ಸೌಲಭ್ಯಗಳನ್ನು ನೀಡುವಲ್ಲಿ ಕಡೆಗಾಣಿಸಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿ ಈ ವರ್ಗವನ್ನು ಸಂಪೂರ್ಣ ಕಡೆಗಣಿಸಿ, ಮತ್ತೊಮ್ಮೆ ಈ ವರ್ಗವನ್ನು ವಂಚಿಸುವ ಚಿಂತನೆ ನಡೆಸಿದ್ದಾರೆ ಎಂದರು.

ರಾಜ್ಯದ ಎಲ್ಲಾ ವಿಭಾಗಗಳಲ್ಲೂ ಮತ್ತು ಇಲಾಖೆಗಳಲ್ಲೂ ಪ್ರಗತಿ ಇಲ್ಲದೇ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕರ್ನಾಟಕದಲ್ಲಿ ರೈತರ ಪರಿಸ್ಥಿತಿ ಅತ್ಯಂತ ದಾರುಣವಾಗಿದೆ. ರೈತರನ್ನು ದೇವರೇ ಕಾಪಾಡಬೇಕಾಗಿದೆ. ಪೂರ್ಣ ಪ್ರಮಾಣದ ಸಚಿವ ಸಂಪುಟ ಇಲ್ಲದೇ ಆಡಳಿತ ಸಂಪೂರ್ಣ ವಿಫಲವಾಗಿದೆ.

ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿಯೂ ಸರ್ಕಾರ ಎಡವಿ, ಈಗ ನಾನಾ ರೀತಿಯ ಮಾನದಂಡಗಳ ನೆಪ ಹೇಳುತ್ತಿದೆ ಎಂದು ಟೀಕಿಸಿದರು.

ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ ಘೋಷಣೆ ಮಾಡಿದ್ದರೂ ಸಾರಿಗೆ ನಿಗಮಗಳಿಗೆ ಸಮರ್ಪಕ ಅನುದಾನ ನೀಡದ ಪರಿಣಾಮ ಅನೇಕ ಬಸ್ಗಳು ರಸ್ತೆಯ ಮಧ್ಯದಲ್ಲೇ ಕೆಟ್ಟು ನಿಲ್ಲುತ್ತಿವೆ. ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಒಬಿಸಿ ಸಮುದಾಯದ ಹಕ್ಕುಗಳ ರಕ್ಷಣೆಗಾಗಿ ಬಿಜೆಪಿ ನಿರಂತರ ಹೋರಾಟ ನಡೆಸಲಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಅನಿಲ್ ಕುಮಾರ್, ವಿಧಾನಪರಿಷತ್ ಸದಸ್ಯರಾದ ವೈ.ಎಂ. ಸತೀಶ್ ಇನ್ನಿತರರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande