ಯಲ್ಲಾಪುರ ಬಳಿ ಅಪಘಾತ: ಪ್ರಧಾನಿ ಮೋದಿ ಸಂತಾಪ, ಗಾಯಾಳುಗಳ ಶೀಘ್ರ ಚೇತರಿಕೆಗೆ ಹಾರೈಕೆ
ನವದೆಹಲಿ, 09 ಜುಲೈ (ಹಿ.ಸ.): ಆ್ಯಂಕರ್: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಾಂತ್ವನ ತಿಳಿಸಿರುವ ಅವರು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ಗು
Pm file photo


ನವದೆಹಲಿ, 09 ಜುಲೈ (ಹಿ.ಸ.):

ಆ್ಯಂಕರ್:

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಾಂತ್ವನ ತಿಳಿಸಿರುವ ಅವರು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಗುರುವಾರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ಸಂಭವಿಸಿದ ಈ ಅಪಘಾತ ಅತ್ಯಂತ ದುಃಖದ ಸಂಗತಿಯಾಗಿದೆ ಎಂದು ಹೇಳಿದ್ದಾರೆ. ಈ ಸಂಕಷ್ಟದ ಸಂದರ್ಭದಲ್ಲಿ ಮೃತರ ಕುಟುಂಬಗಳ ದುಃಖದಲ್ಲಿ ತಾವು ಭಾಗಿಯಾಗಿರುವುದಾಗಿ ತಿಳಿಸಿದ ಅವರು, ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ಗಮನಾರ್ಹವಾಗಿ, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಅರಬೈಲ್ ಘಾಟ್‌ನ ಬಳಗಾರ್ ಸಮೀಪ ಗುರುವಾರ ಮುಂಜಾನೆ ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಆರು ಮಂದಿ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande