
ಬೆಂಗಳೂರು, 09 ಜುಲೈ (ಹಿ.ಸ.)
ಆ್ಯಂಕರ್
ಡೆಂಗ್ಯೂ ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮನೆ-ಮನೆ ಭೇಟಿ ಹಾಗೂ ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ವಿಶೇಷ ಪರಿಶೀಲನಾ ಕಾರ್ಯಾಚರಣೆ ನಡೆಸಲಾಯಿತು.
ಈ ಕಾರ್ಯಾಚರಣೆಯ ವೇಳೆ ಆರೋಗ್ಯ ಸಿಬ್ಬಂದಿ ಮತ್ತು ಅಧಿಕಾರಿಗಳು ಡೆಂಗ್ಯೂ ಸೊಳ್ಳೆಗಳ ಲಾರ್ವಾ ಉತ್ಪತ್ತಿ ತಾಣಗಳನ್ನು ಗುರುತಿಸಿ ಅವುಗಳನ್ನು ನಿರ್ಮೂಲನೆಗೊಳಿಸುವ ಕ್ರಮ ಕೈಗೊಂಡರು. ಮನೆಗಳ ಸುತ್ತಮುತ್ತ ನೀರು ನಿಂತಿರುವ ಪಾತ್ರೆಗಳು, ಟ್ಯಾಂಕ್ಗಳು, ಟೈರ್ಗಳು, ನಿರ್ಮಾಣ ಸ್ಥಳಗಳಲ್ಲಿ ಸಂಗ್ರಹವಾಗಿರುವ ನೀರು ಸೇರಿದಂತೆ ಲಾರ್ವಾ ಬೆಳೆಯುವ ಸಾಧ್ಯತೆ ಇರುವ ಪ್ರದೇಶಗಳನ್ನು ಪರಿಶೀಲಿಸಲಾಯಿತು.
ಸಾರ್ವಜನಿಕರು ತಮ್ಮ ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು, ವಾರಕ್ಕೊಮ್ಮೆ ನೀರಿನ ಸಂಗ್ರಹ ಪಾತ್ರೆಗಳನ್ನು ಸ್ವಚ್ಛಗೊಳಿಸಬೇಕು ಹಾಗೂ ಡೆಂಗ್ಯೂ ತಡೆಗೆ ಪಾಲಿಕೆಯೊಂದಿಗೆ ಸಹಕರಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
ಈ ವಿಶೇಷ ಕಾರ್ಯಾಚರಣೆಯು ಡೆಂಗ್ಯೂ ನಿಯಂತ್ರಣ ಮತ್ತು ಸಾರ್ವಜನಿಕ ಆರೋಗ್ಯ ರಕ್ಷಣೆಯ ಉದ್ದೇಶದಿಂದ ಮುಂದುವರಿಯಲಿದೆ.
---------------
ಹಿಂದೂಸ್ತಾನ್ ಸಮಾಚಾರ್ / SNEHA K