ಜುಲೈ ೧೧ರಂದು ಮುಖ್ಯಮಂತ್ರಿಗಳಿಗೆ ಸರ್ಕಾರಿ ನೌಕರರ ಸಂಘದಿ0ದ ಅಭಿನಂದನೆ
ಜುಲೈ ೧೧ರಂದು ಮುಖ್ಯಮಂತ್ರಿಗಳಿಗೆ ಸರ್ಕಾರಿ ನೌಕರರ ಸಂಘದಿ0ದ ಅಭಿನಂದನೆ
ಜುಲೈ ೧೧ರಂದು ಮುಖ್ಯಮಂತ್ರಿಗಳಿಗೆ ಸರ್ಕಾರಿ ನೌಕರರ ಸಂಘದಿ0ದ ಅಭಿನಂದನೆ


ಕೋಲಾರ, ೦೯ ಜುಲೈ (ಹಿ.ಸ):

ಆ್ಯಂಕರ್: ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರಿಗೆ ಜುಲೈ ೧೧ರಂದು ನಮ್ಮಾಭಿಮಾನದ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿದ್ದು ಅ ಸಂದರ್ಭದಲ್ಲಿ ಹಳೇ ಪಿಂಚಣಿ ಯೋಜನೆ ಮರು ಜಾರಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಮನವಿ ಸಲ್ಲಿಸಲಾಗುತ್ತದೆ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಎ.ಅಜಯ್ ಕುಮಾರ್ ತಿಳಿಸಿದ್ದಾರೆ

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಅಭಿನಂದನೆ ಕಾರ್ಯಕ್ರಮದ ಅಡಿಯಲ್ಲಿ ಬೆಳಿಗ್ಗೆ ೧೧ ಗಂಟೆಗೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಸೇರಿದಂತೆ ಅನೇಕ ಸಚಿವರು, ಸಂಘದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಕೋಲಾರ ಜಿಲ್ಲೆಯಿಂದ ಸುಮಾರು ೧೫೦೦ ಸರ್ಕಾರಿ ನೌಕರರು ಅಭಿಮಾನದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ನೌಕರರ ೩೦೦೦ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ ಸರ್ಕಾರಿ ನೌಕರರ ಒಪಿಎಸ್ ಮರು ಜಾರಿ, ಕೇಂದ್ರ ಸರ್ಕಾರಿ ನೌಕರರಂತೆ ಸಮಾನ ವೇತನಕ್ಕೆ, ಇದೇ ಸಂದರ್ಭದಲ್ಲಿ ಒತ್ತಾಯಿಸಲಾಗುತ್ತದೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನಮ್ಮಾಭಿಮಾನ ಸನ್ಮಾನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿದೆ ಎಂದು ಅಜಯ್ ಕುಮಾರ್ ಮನವಿ ಮಾಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande