ಮತದಾರರ ವಿಶೇಷ ಪರಿಷ್ಕರಣೆಯ ಬಗ್ಗೆ ಜಾಗೃತಿ ಮೂಡಿಲು ಪಂಜಿನ ಮೆರವಣಿಗೆ
ಮತದಾರರ ವಿಶೇಷ ಪರಿಷ್ಕರಣೆಯ ಬಗ್ಗೆ ಜಾಗೃತಿ ಮೂಡಿಲು ಪಂಜಿನ ಮೆರವಣಿಗೆ
ಮತದಾರರ ವಿಶೇಷ ಪರಿಷ್ಕರಣೆಯ ಬಗ್ಗೆ ಜಾಗೃತಿ ಮೂಡಿಸಲು ಕೋಲಾರದಲ್ಲಿ ಗುರವಾರ ಸಂಜೆ ಪಂಜಿನ ಮೆರವಣೆಗೆ ನಡೆಯಿತು.


ಕೋಲಾರ ೯ ಜುಲೈ (ಹಿ.ಸ):

ಆಂಕರ್ : ಯಾವೊಬ್ಬ ಅರ್ಹ ಮತದಾರನೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಹಾಗೂ ಯಾವುದೇ ಅನರ್ಹ ಮತದಾರ ಪಟ್ಟಿಯಲ್ಲಿ ಸೇರ್ಪಡೆಯಾಗದಂತೆ ಎಚ್ಚರವಹಿಸಬೇಕು. ಇದುವೇ ಎಸ್ಐಆರ್ ಪ್ರಕ್ರಿಯೆಯ ಮೂಲ ಧ್ಯೇಯವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್ ಪಿ. ಬಾಗೇವಾಡಿ ಅವರು ಸ್ಪಷ್ಟಪಡಿಸಿದರು.

ನಗರದ ಗಾಂಧಿ ಚೌಕದಲ್ಲಿ ಎಸ್ಐಆರ್ ಹಾಗೂ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಲು ಹಮ್ಮಿಕೊಳ್ಳಲಾಗಿದ್ದ 'ಸ್ವೀಪ್' ಚಟುವಟಿಕೆಯ ಅಂಗವಾಗಿ ಆಕರ್ಷಕ ಪಂಜಿನ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಮೆರವಣಿಗೆಯ ವೇಳೆ ನೆರೆದಿದ್ದ ನವ ಮತದಾರರು ಹಾಗೂ ಸಾರ್ವಜನಿಕರೊಂದಿಗೆ ನೇರ ಸಂವಾದ ನಡೆಸಿದ ಸಿಇಒ ಅವರು, ಪ್ರಜಾಪ್ರಭುತ್ವದ ಬಲವರ್ಧನೆಗೆ ಪ್ರತಿಯೊಬ್ಬರ ಮತವೂ ಅಮೂಲ್ಯವಾಗಿದೆ. ಹೀಗಾಗಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಎಲ್ಲರೂ ಜವಾಬ್ದಾರಿಯಿಂದ ಪಾಲ್ಗೊಳ್ಳಬೇಕು ಹಾಗೂ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ಅರಿವು ಮೂಡಿಸಿದರು.

ಮತದಾನದ ಜಾಗೃತಿಗಾಗಿ ಆಯೋಜಿಸಿದ್ದ ಪಂಜಿನ ಮೆರವಣಿಗೆಯು ನೋಡುಗರ ಗಮನ ಸೆಳೆಯಿತು. ಗಾಂಧಿ ಚೌಕದಿಂದ ಅದ್ಧೂರಿಯಾಗಿ ಆರಂಭಗೊAಡ ಮೆರವಣಿಗೆಯು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಚಂಪಕ್ ವೃತ್ತದಿಂದ ಸಾಗಿ, ಫುಡ್ಕೋರ್ಟ್ ಮುಖಾಂತರ ಹಾದುಹೋಗಿ ಅಂತಿಮವಾಗಿ ಕಾಲೇಜು ವೃತ್ತದಲ್ಲಿ ಸಂಪನ್ನಗೊಂಡಿತು.

ಮೆರವಣಿಗೆಯುದ್ದಕ್ಕೂ ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಯುವಕರು ಹಾಗೂ ನವಮತದಾರರು ಪಂಜು ಹಿಡಿದು ಉತ್ಸಾಹದಿಂದ ಹೆಜ್ಜೆ ಹಾಕಿದರು.

ಜಾಗೃತಿ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್, ಕೋಲಾರ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಮಂಜುನಾಥ್, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ರವಿಚಂದ್ರನ್, ಪ್ರಮುಖರಾದ ಜಗದೀಶ್, ಕೃಷ್ಣಮೂರ್ತಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಮೈಲಾರಪ್ಪ ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande