
ಧಾರವಾಡ, 10 ಆಗಸ್ಟ್ (ಹಿ.ಸ.):
ಆ್ಯಂಕರ್:ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಹೊಂಬೆಳಕು ಪ್ರತಿಷ್ಠಾನ ಧಾರವಾಡ ಇವರ ಸಹಯೋಗದಲ್ಲಿ ಡಾ. ವೀಣಾ ಬಿರಾದಾರ ಅವರ ‘ವಚನ ಪ್ರಭೆ’ (ಶ್ರಾವಣ ನಿತ್ಯ ವಚನೋತ್ಸವ ಮಾಲಿಕೆ-1) ಕೃತಿ ಲೋಕಾರ್ಪಣೆ ಸಮಾರಂಭವನ್ನು ಆಗಸ್ಟ್ 11ರಂದು ಆಯೋಜಿಸಲಾಗಿದೆ.
ಧಾರವಾಡದ ಆರ್.ಎನ್. ಶೆಟ್ಟಿ ಕ್ರೀಡಾಂಗಣದ ಸಮೀಪದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಭಾಭವನದಲ್ಲಿ ಸಂಜೆ 4.30ಕ್ಕೆ ಕಾರ್ಯಕ್ರಮ ನಡೆಯಲಿದೆ.
ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಬಸವ ಶಾಂತಿ ಮಿಷನ್ ಟ್ರಸ್ಟ್ ಅಧ್ಯಕ್ಷ ಮಹಾದೇವ ಹೊರಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಹಾತ್ಮ ಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸುರೇಶ್ ವಿ. ನಾಡಗೌಡರ ಕೃತಿ ಲೋಕಾರ್ಪಣೆ ಮಾಡಲಿದ್ದಾರೆ.
ನಿವೃತ್ತ ಪ್ರಾಂಶುಪಾಲ ಪ್ರೊ. ಬಿ.ಸಿ. ಬಿರಾದಾರ ಕೃತಿ ಪರಿಚಯ ಮಾಡಲಿದ್ದು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ ಗೌರವ ಉಪಸ್ಥಿತರಿರುವರು. ಲೇಖಕಿ ಡಾ. ವೀಣಾ ಬಿರಾದಾರ ಪ್ರಾಸ್ತಾವಿಕ ನುಡಿ ಆಡಲಿದ್ದಾರೆ.
31 ಶಿವಶರಣರ ಜೀವನ ಚರಿತ್ರೆ ಹಾಗೂ ಅವರ ವಚನಗಳ ಸರಳ ವಿಶ್ಲೇಷಣೆಯನ್ನು ಒಳಗೊಂಡಿರುವ ‘ವಚನ ಪ್ರಭೆ’ ಕೃತಿ ಲೋಕಾರ್ಪಣೆ ಸಮಾರಂಭಕ್ಕೆ ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಕೋರಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.