ಬೀಜಿಂಗ್ ಒಲಿಂಪಿಕ್ಸ್ ಚಿನ್ನದ ಪದಕ ನೆನಪಿಸಿಕೊಂಡ ಅಭಿನವ್ ಬಿಂದ್ರಾ
ನವದೆಹಲಿ, 11 ಆಗಸ್ಟ್ (ಹಿ.ಸ.): ಆ್ಯಂಕರ್:ಭಾರತದ ಶ್ರೇಷ್ಠ ಶೂಟರ್ ಅಭಿನವ್ ಬಿಂದ್ರಾ ಅವರು 2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಗೆದ್ದ ಐತಿಹಾಸಿಕ ಚಿನ್ನದ ಪದಕವನ್ನು ಸ್ಮರಿಸಿದ್ದು, ಅದನ್ನು ತಮ್ಮ ಕ್ರೀಡಾ ಜೀವನದ “ಅತ್ಯುನ್ನತ ಶಿಖರ” ಎಂದು ಬಣ್ಣಿಸಿದ್ದಾರೆ. 2008ರ ಆಗಸ್ಟ್ 11ರಂದು ಬಿಂದ್ರಾ 10 ಮ
अभिनव बिंद्रा


ನವದೆಹಲಿ, 11 ಆಗಸ್ಟ್ (ಹಿ.ಸ.):

ಆ್ಯಂಕರ್:ಭಾರತದ ಶ್ರೇಷ್ಠ ಶೂಟರ್ ಅಭಿನವ್ ಬಿಂದ್ರಾ ಅವರು 2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಗೆದ್ದ ಐತಿಹಾಸಿಕ ಚಿನ್ನದ ಪದಕವನ್ನು ಸ್ಮರಿಸಿದ್ದು, ಅದನ್ನು ತಮ್ಮ ಕ್ರೀಡಾ ಜೀವನದ “ಅತ್ಯುನ್ನತ ಶಿಖರ” ಎಂದು ಬಣ್ಣಿಸಿದ್ದಾರೆ.

2008ರ ಆಗಸ್ಟ್ 11ರಂದು ಬಿಂದ್ರಾ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ 700.5 ಅಂಕ ಗಳಿಸಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದರು. ಒಲಿಂಪಿಕ್ಸ್‌ನ ವೈಯಕ್ತಿಕ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದರು.

ಐತಿಹಾಸಿಕ ಸಾಧನೆಯ 18ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿರುವ ಬಿಂದ್ರಾ, “18 ವರ್ಷಗಳ ಹಿಂದೆ ಇದೇ ದಿನ ನಾನು ನನ್ನ ಕ್ರೀಡಾ ಜೀವನದ ಅತ್ಯುನ್ನತ ಶಿಖರ ತಲುಪಿದ್ದೆ. ಅಂದಿನಿಂದ ಜೀವನವು ಶಿಖರಗಳ ನಡುವಿನ ಪ್ರಯಾಣವೂ ಅಷ್ಟೇ ಮಹತ್ವದ್ದಾಗಿದೆ ಎಂಬುದನ್ನು ಕಲಿಸಿದೆ” ಎಂದು ಹೇಳಿದ್ದಾರೆ.

ಬೀಜಿಂಗ್ ಬಳಿಕ 2012ರ ಒಲಿಂಪಿಕ್ಸ್‌ನಲ್ಲಿ 16ನೇ ಸ್ಥಾನ ಹಾಗೂ 2016ರ ಒಲಿಂಪಿಕ್ಸ್‌ನಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದರು. ಬಿಂದ್ರಾ ಕಾಮನ್‌ವೆಲ್ತ್ ಕ್ರೀಡಾಕೂಟಗಳಲ್ಲಿ ಒಟ್ಟು ಏಳು ಪದಕ, ಅದರಲ್ಲಿ ನಾಲ್ಕು ಚಿನ್ನದ ಪದಕಗಳನ್ನು ಗೆದ್ದಿದ್ದಾರೆ. ಏಷ್ಯನ್ ಕ್ರೀಡಾಕೂಟದಲ್ಲಿ ಮೂರು ಪದಕ ಹಾಗೂ 2006ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ 10 ಮೀಟರ್ ಏರ್ ರೈಫಲ್ ಚಿನ್ನದ ಪದಕ ಗೆದ್ದಿದ್ದಾರೆ.

2010ರ ದೆಹಲಿ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ತಂಡ ವಿಭಾಗದಲ್ಲಿ ಚಿನ್ನ ಹಾಗೂ ವೈಯಕ್ತಿಕ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಎರಡು ದಶಕಗಳಿಗೂ ಹೆಚ್ಚು ಕಾಲದ ವೃತ್ತಿಜೀವನದಲ್ಲಿ 150ಕ್ಕೂ ಅಧಿಕ ವೈಯಕ್ತಿಕ ಪದಕಗಳನ್ನು ಗೆದ್ದಿರುವ ಅವರು ಭಾರತದ ಶ್ರೇಷ್ಠ ಕ್ರೀಡಾಪಟುಗಳಲ್ಲಿ ಒಬ್ಬರಾಗಿದ್ದಾರೆ.

ಕ್ರೀಡೆಯಿಂದ ನಿವೃತ್ತಿಯಾದ ಬಳಿಕ ಅಭಿನವ್ ಬಿಂದ್ರಾ ಫೌಂಡೇಶನ್ ಟ್ರಸ್ಟ್ ಸ್ಥಾಪಿಸಿ, ಆಧುನಿಕ ಕ್ರೀಡಾ ವಿಜ್ಞಾನ ಮತ್ತು ತಂತ್ರಜ್ಞಾನದ ನೆರವಿನಿಂದ ಯುವ ಕ್ರೀಡಾಪಟುಗಳಿಗೆ ಬೆಂಬಲ ನೀಡುತ್ತಿದ್ದಾರೆ. ಉನ್ನತ ಮಟ್ಟದ ತರಬೇತಿ, ಶಿಕ್ಷಣ ಹಾಗೂ ಸಾಮಾಜಿಕ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಭಾರತೀಯ ಕ್ರೀಡೆಯಲ್ಲಿ ಉತ್ತಮ ವ್ಯವಸ್ಥೆಗಳನ್ನು ಉತ್ತೇಜಿಸುವ ಕಾರ್ಯವನ್ನು ಸಂಸ್ಥೆ ಮಾಡುತ್ತಿದೆ.

ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಕ್ರೀಡಾಪಟುಗಳ ಆಯೋಗದ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದ ಬಿಂದ್ರಾ, ಒಲಿಂಪಿಕ್ ಚಳವಳಿಗೆ ನೀಡಿದ ಕೊಡುಗೆಗಾಗಿ ‘ಒಲಿಂಪಿಕ್ ಆರ್ಡರ್’ ಗೌರವ ಪಡೆದ ಮೊದಲ ಭಾರತೀಯರಾಗಿದ್ದಾರೆ. 2018ರಲ್ಲಿ ಅಂತರರಾಷ್ಟ್ರೀಯ ಶೂಟಿಂಗ್ ಕ್ರೀಡಾ ಒಕ್ಕೂಟದ ಅತ್ಯುನ್ನತ ಗೌರವವಾದ ‘ಬ್ಲೂ ಕ್ರಾಸ್’ ಪ್ರಶಸ್ತಿಗೂ ಅವರು ಭಾಜನರಾಗಿದ್ದರು.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande