ದೆಹಲಿ ಹೈಕೋರ್ಟ್ಗೆ ಹುಸಿ ಬಾಂಬ್ ಬೆದರಿಕೆ
ನವದೆಹಲಿ, 14 ಆಗಸ್ಟ್ (ಹಿ.ಸ.): ಆ್ಯಂಕರ್:ಸ್ವಾತಂತ್ರ್ಯೋತ್ಸವದ ಮುನ್ನಾದಿನವಾದ ಶುಕ್ರವಾರ ದೆಹಲಿ ಹೈಕೋರ್ಟ್‌ಗೆ ಬಾಂಬ್ ಸ್ಫೋಟದ ಬೆದರಿಕೆ ಇ-ಮೇಲ್ ಮೂಲಕ ಬಂದಿದ್ದು, ಪರಿಶೀಲನೆ ಬಳಿಕ ಅದು ಹುಸಿ ಬೆದರಿಕೆ ಎಂಬುದು ದೃಢಪಟ್ಟಿದೆ. ಇ-ಮೇಲ್‌ನಲ್ಲಿ ಮಧ್ಯಾಹ್ನ 2.11ಕ್ಕೆ ಹೈಕೋರ್ಟ್‌ನಲ್ಲಿ 30 ಎಂ.ಬಿ. ಸ್
दिल्ली हाई कोर्ट (फाइल फोटो)


ನವದೆಹಲಿ, 14 ಆಗಸ್ಟ್ (ಹಿ.ಸ.):

ಆ್ಯಂಕರ್:ಸ್ವಾತಂತ್ರ್ಯೋತ್ಸವದ ಮುನ್ನಾದಿನವಾದ ಶುಕ್ರವಾರ ದೆಹಲಿ ಹೈಕೋರ್ಟ್‌ಗೆ ಬಾಂಬ್ ಸ್ಫೋಟದ ಬೆದರಿಕೆ ಇ-ಮೇಲ್ ಮೂಲಕ ಬಂದಿದ್ದು, ಪರಿಶೀಲನೆ ಬಳಿಕ ಅದು ಹುಸಿ ಬೆದರಿಕೆ ಎಂಬುದು ದೃಢಪಟ್ಟಿದೆ.

ಇ-ಮೇಲ್‌ನಲ್ಲಿ ಮಧ್ಯಾಹ್ನ 2.11ಕ್ಕೆ ಹೈಕೋರ್ಟ್‌ನಲ್ಲಿ 30 ಎಂ.ಬಿ. ಸ್ಫೋಟ ಸಂಭವಿಸಲಿದೆ ಎಂದು ಬೆದರಿಕೆ ಹಾಕಲಾಗಿತ್ತು. ದೆಹಲಿಯ ಜಿಲ್ಲಾ ನ್ಯಾಯಾಲಯಗಳಲ್ಲಿಯೂ ಮಧ್ಯಾಹ್ನ 3.11ಕ್ಕೆ ಬಾಂಬ್ ಸ್ಫೋಟಿಸುವುದಾಗಿ ಎಚ್ಚರಿಕೆ ನೀಡಲಾಗಿತ್ತು. ಅಲ್ಲದೆ, ‘ದೆಹಲಿ ಖಲಿಸ್ತಾನವಾಗಲಿದೆ’ ಎಂಬ ಸಂದೇಶವನ್ನೂ ಕಳುಹಿಸಲಾಗಿತ್ತು.

ಬೆದರಿಕೆ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ತಕ್ಷಣ ತಪಾಸಣೆ ನಡೆಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡರು. ದೆಹಲಿ ಹೈಕೋರ್ಟ್ ಬಾರ್ ಅಸೋಸಿಯೇಷನ್‌ನ ಜಂಟಿ ಕಾರ್ಯದರ್ಶಿ ಕುನಾಲ್ ಮಲ್ಹೋತ್ರಾ ಅವರು ಬೆದರಿಕೆ ಹುಸಿಯಾಗಿದ್ದು, ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಈ ಹಿಂದೆ 2025ರ ಸೆಪ್ಟೆಂಬರ್ 12ರಂದೂ ದೆಹಲಿ ಹೈಕೋರ್ಟ್‌ಗೆ ಬಾಂಬ್ ಬೆದರಿಕೆ ಬಂದಿತ್ತು. 2017ರ ಆಗಸ್ಟ್ 17ರಂದು ದೆಹಲಿ ಪೊಲೀಸ್ ಕೇಂದ್ರ ಕಚೇರಿಗೂ ಹೈಕೋರ್ಟ್‌ನ್ನು ಸ್ಫೋಟಿಸುವುದಾಗಿ ಬೆದರಿಕೆ ಕರೆ ಬಂದಿತ್ತು.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande