ಜಿಲ್ಲಾ ನ್ಯಾಯಾಲಯದಲ್ಲಿ ವಿಶೇಷ ಆರೋಗ್ಯ ಶಿಬಿರ
ಧಾರವಾಡ, 14 ಆಗಸ್ಟ್ (ಹಿ.ಸ.): ಆ್ಯಂಕರ್:ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆಯುಷ್ ಇಲಾಖೆ ಹಾಗೂ ಧಾರವಾಡ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ವಿಶೇಷ ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ
ಆರೋಗ್ಯ ತಪಾಸಣಾ ಶಿಬಿರ


ಧಾರವಾಡ, 14 ಆಗಸ್ಟ್ (ಹಿ.ಸ.):

ಆ್ಯಂಕರ್:ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆಯುಷ್ ಇಲಾಖೆ ಹಾಗೂ ಧಾರವಾಡ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ವಿಶೇಷ ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎನ್.ವಿ. ವಿಜಯ ಅವರು ಶಿಬಿರ ಉದ್ಘಾಟಿಸಿ, ವಿವಿಧ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಇಂತಹ ಆರೋಗ್ಯ ಶಿಬಿರಗಳು ಸಹಕಾರಿಯಾಗುತ್ತವೆ. ಎಲ್ಲರೂ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ, ರಕ್ತದೊತ್ತಡ ಮತ್ತು ಮಧುಮೇಹ ತಪಾಸಣೆ ನಡೆಸಿ, ಉಚಿತ ಔಷಧಗಳನ್ನು ವಿತರಿಸಲಾಯಿತು. 500ಕ್ಕೂ ಹೆಚ್ಚು ಮಂದಿ ಶಿಬಿರದ ಪ್ರಯೋಜನ ಪಡೆದರು.

ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷರು, ನ್ಯಾಯಾಧೀಶರು, ವಕೀಲರು ಹಾಗೂ ನ್ಯಾಯಾಲಯದ ಸಿಬ್ಬಂದಿ ಪಾಲ್ಗೊಂಡಿದ್ದರು. ಸದಸ್ಯ ಕಾರ್ಯದರ್ಶಿ ಎ.ಎಂ. ಬಡಿಗೇರ ಕಾರ್ಯಕ್ರಮ ನಿರೂಪಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande