ಆರೋಗ್ಯ ಸಚಿವ ಜೆ.ಪಿ. ನಡ್ಡಾ ಏಮ್ಸ್ಗೆ ದಾಖಲು; ಆರೋಗ್ಯ ಸ್ಥಿರ
ನವದೆಹಲಿ, 14 ಆಗಸ್ಟ್ (ಹಿ.ಸ.): ಆ್ಯಂಕರ್: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾ ಅವರನ್ನು ಅಸ್ವಸ್ಥತೆಯ ಹಿನ್ನೆಲೆಯಲ್ಲಿ ಗುರುವಾರ ಸಂಜೆ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಆಸ್ಪತ್ರೆಗೆ ದಾಖಲಿಸಲಾಗಿದೆ. ಏಮ್ಸ್ ವೈದ್ಯರು ನಡ್ಡಾ ಅವರ ಸಮಗ್ರ ವೈದ್
केंद्रीय मंत्री जे पी नड्डा


ನವದೆಹಲಿ, 14 ಆಗಸ್ಟ್ (ಹಿ.ಸ.):

ಆ್ಯಂಕರ್:

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾ ಅವರನ್ನು ಅಸ್ವಸ್ಥತೆಯ ಹಿನ್ನೆಲೆಯಲ್ಲಿ ಗುರುವಾರ ಸಂಜೆ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಆಸ್ಪತ್ರೆಗೆ ದಾಖಲಿಸಲಾಗಿದೆ.

ಏಮ್ಸ್ ವೈದ್ಯರು ನಡ್ಡಾ ಅವರ ಸಮಗ್ರ ವೈದ್ಯಕೀಯ ಪರೀಕ್ಷೆ ನಡೆಸಿದ್ದು, ಕೊರೊನರಿ ಆಂಜಿಯೋಗ್ರಫಿಯನ್ನೂ ಮಾಡಲಾಗಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದ್ದು, ಹೃದ್ರೋಗ ವಿಭಾಗದ ತಜ್ಞ ವೈದ್ಯರ ತಂಡ ನಿರಂತರವಾಗಿ ಮೇಲ್ವಿಚಾರಣೆ ನಡೆಸುತ್ತಿದೆ ಎಂದು ಏಮ್ಸ್ ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಅಸ್ವಸ್ಥತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆತರಲಾಗಿದ್ದು, ಅಗತ್ಯ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ನಡ್ಡಾ ಅವರ ಆರೋಗ್ಯದಲ್ಲಿ ಯಾವುದೇ ಗಂಭೀರ ಸಮಸ್ಯೆ ಇಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande