

ಬಳ್ಳಾರಿ, 15 ಆಗಸ್ಟ್ (ಹಿ.ಸ.)
ಆ್ಯಂಕರ್ : ಭಾರತದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಆವರಣದಲ್ಲಿ ರಾಷ್ಟ್ರ ಧ್ವಜಾರೋಹಣವನ್ನು ಶನಿವಾರ ನೆರವೇರಿಸಲಾಯಿತು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ, ಅವ್ವಾರು ಮಂಜುನಾಥ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಲಕ್ಷಾಂತರ ಭಾರತೀಯ ಒಗ್ಗಟ್ಟಿನ ಹೋರಾಟದ ಫಲವಾಗಿ ಭಾರತಕ್ಕೆ ಬ್ರಿಟೀಷರಿಂದ ಸ್ವಾತಂತ್ರ್ಯ ಸಿಕ್ಕಿದೆ. ಸ್ವಾತಂತ್ರ ಹೋರಾಟಗಾರರ ತ್ಯಾಗ, ಬಲಿದಾನ ಮತ್ತು ನಿಸ್ವಾರ್ಥ ಹೋರಾಟಗಳನ್ನು ನಿತ್ಯವೂ ನಾವೆಲ್ಲರೂ ಸ್ಮರಿಸಬೇಕು ಎಂದರು.
ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ, ಕೆ.ಸಿ. ಸುರೇಶಬಾಬು ಅವರು, ಭಾರತದ ಏಕತೆ, ಅಖಂಡತೆ ಹಾಗೂ ಪ್ರಗತಿಗಾಗಿ ಪ್ರತಿಯೊಬ್ಬ ಭಾರತೀಯರು ಬದ್ಧತೆಯಿಂದ ಶ್ರಮಿಸಬೇಕಿದೆ ಎಂದರು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಹಿರಿಯ ಉಪಾಧ್ಯಕ್ಷರಾದ, ಎಸ್. ದೊಡ್ಡನಗೌಡ, ಉಪಾಧ್ಯಕ್ಷರಾದ ಸೊಂತ ಗಿರಿಧರ್,ಪಿ.ಪಾಲಣ್ಣ, ಜಂಟಿ ಕಾರ್ಯದರ್ಶಿಗಳಾದ ಡಾ. ಮರ್ಚೇಡ್ ಮಲ್ಲಿಕಾರ್ಜುನಗೌಡ, ವಿ.ರಾಮಚಂದ್ರ, ಖಜಾಂಚಿಗಳಾದ, ಸಿ.ಎಸ್.ಸತ್ಯನಾರಾಯಣ, ಮಾಜಿ ಅಧ್ಯಕ್ಷರಾದ, ಬಿ. ಮಹಾರುದ್ರಗೌಡ, ಸಿ.ಶ್ರೀನಿವಾಸ್ ರಾವ್, ಡಾ. ಡಿ.ಎಲ್. ರಮೇಶ್ ಗೋಪಾಲ್, ಪತ್ರಿಕಾ ಹಾಗು ಮಾಧ್ಯಮ ಸಮಿತಿ ಚೇರ್ಮನ್, ಟಿ.ಶ್ರೀನಿವಾಸರಾವ್, ಕಾರ್ಯಕಾರಿ ಸಮಿತಿ ಸದಸ್ಯರು, ವಿವಿಧ ಸಮಿತಿ ಚೇರ್ಮನ್ಗಳು, ವಿಶೇಷ ಆಹ್ವಾನಿತರು, ವಿಶೇಷ ಸಮನ್ವಯ ಸಮಿತಿ ಸದಸ್ಯರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದು, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್