ನವೀನ ಪಾರ್ಕ್ ರಾಜ್ಯದ ಮಾದರಿ ಬಡಾವಣೆಯಾಗಿಸಲು ಸಂಕಲ್ಪ: ಡಾ. ವಿ.ಎಸ್.ವಿ. ಪ್ರಸಾದ್
ಹುಬ್ಬಳ್ಳಿ, 15 ಆಗಸ್ಟ್ (ಹಿ.ಸ.): ಆ್ಯಂಕರ್: ಉತ್ತರ ಕರ್ನಾಟಕದಲ್ಲಿಯೇ ಪ್ರಸಿದ್ಧ ಹಾಗೂ ಸುವ್ಯವಸ್ಥಿತ ಬಡಾವಣೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ನವೀನ ಪಾರ್ಕ್‌ ಅನ್ನು ರಾಜ್ಯದಲ್ಲಿಯೇ ಮಾದರಿ ಬಡಾವಣೆಯನ್ನಾಗಿ ರೂಪಿಸುವ ಸಂಕಲ್ಪ ಹೊಂದಲಾಗಿದೆ ಎಂದು ಸ್ವರ್ಣ ಸಮೂಹ ಸಂಸ್ಥೆಗಳ ಸಂಸ್ಥಾಪಕ ಹಾಗೂ ನವೀನ ಪ
ನವೀನ ಪಾರ್ಕ್ ಧ್ವಜಾರೋಹಣ


ಹುಬ್ಬಳ್ಳಿ, 15 ಆಗಸ್ಟ್ (ಹಿ.ಸ.):

ಆ್ಯಂಕರ್:

ಉತ್ತರ ಕರ್ನಾಟಕದಲ್ಲಿಯೇ ಪ್ರಸಿದ್ಧ ಹಾಗೂ ಸುವ್ಯವಸ್ಥಿತ ಬಡಾವಣೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ನವೀನ ಪಾರ್ಕ್‌ ಅನ್ನು ರಾಜ್ಯದಲ್ಲಿಯೇ ಮಾದರಿ ಬಡಾವಣೆಯನ್ನಾಗಿ ರೂಪಿಸುವ ಸಂಕಲ್ಪ ಹೊಂದಲಾಗಿದೆ ಎಂದು ಸ್ವರ್ಣ ಸಮೂಹ ಸಂಸ್ಥೆಗಳ ಸಂಸ್ಥಾಪಕ ಹಾಗೂ ನವೀನ ಪಾರ್ಕ್‌ ರೆಸಿಡೆಂಟ್ಸ್‌ ಅಸೋಸಿಯೇಷನ್‌ ಅಧ್ಯಕ್ಷ ಡಾ. ವಿ.ಎಸ್.ವಿ. ಪ್ರಸಾದ್ ಹೇಳಿದರು.

ನವೀನ ಪಾರ್ಕ್‌ ರೆಸಿಡೆಂಟ್ಸ್‌ ಅಸೋಸಿಯೇಷನ್‌ ವತಿಯಿಂದ ಆಯೋಜಿಸಿದ್ದ 80ನೇ ಸ್ವಾತಂತ್ರ್ಯೋತ್ಸವದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಪಾಲಿಕೆಯ ವತಿಯಿಂದ ಬಡಾವಣೆಯ ಉದ್ಯಾನವನವನ್ನು ಸಂಘಕ್ಕೆ ಹಸ್ತಾಂತರಿಸಲಾಗಿದ್ದು, ಅದನ್ನು ಅತ್ಯುತ್ತಮ ರೀತಿಯಲ್ಲಿ ಅಭಿವೃದ್ಧಿಪಡಿಸುವ ಜವಾಬ್ದಾರಿ ಸಂಘದ ಮೇಲಿದೆ. ಮಕ್ಕಳ ಹಾಗೂ ಹಿರಿಯರ ಅನುಕೂಲಕ್ಕಾಗಿ ವಾಯುವಿಹಾರ ಮಾರ್ಗ, ಹಸಿರು ವಾತಾವರಣ, ಆಸನ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಹಂತ ಹಂತವಾಗಿ ಕಲ್ಪಿಸಲಾಗುವುದು ಎಂದರು.

ಬಡಾವಣೆಯ ಸ್ವಚ್ಛತೆ, ಪರಿಸರ ಸಂರಕ್ಷಣೆ, ಶಿಸ್ತು ಹಾಗೂ ಸಾರ್ವಜನಿಕ ಸೌಲಭ್ಯಗಳ ನಿರ್ವಹಣೆಯಲ್ಲಿ ನಿವಾಸಿಗಳು ಸಂಘದೊಂದಿಗೆ ಕೈಜೋಡಿಸಬೇಕು. ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದರೆ ನವೀನ ಪಾರ್ಕ್‌ ರಾಜ್ಯದಲ್ಲಿಯೇ ಮಾದರಿ ಬಡಾವಣೆಯಾಗಿ ಹೊರಹೊಮ್ಮಲಿದೆ ಎಂದು ಹೇಳಿದರು.

ಆಗಸ್ಟ್‌ 15 ಪ್ರತಿಯೊಬ್ಬ ಭಾರತೀಯನಲ್ಲೂ ಹೆಮ್ಮೆ, ಗೌರವ ಹಾಗೂ ದೇಶಭಕ್ತಿಯ ಭಾವನೆ ಮೂಡಿಸುವ ಪವಿತ್ರ ದಿನ. ಅನೇಕ ಹೋರಾಟ, ತ್ಯಾಗ ಮತ್ತು ಸತ್ಯಾಗ್ರಹಗಳ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು, ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಿಸುವುದು ಹಾಗೂ ದೇಶದ ಬಗ್ಗೆ ಪ್ರೀತಿ ಹೊಂದುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದರು.

ಕಾರ್ಯಕ್ರಮದಲ್ಲಿ ಪಾಲಿಕೆ ಸದಸ್ಯೆ ಸುವರ್ಣ ಕಲ್ಲಕುಂಟ್ಲಾ, ಸಂಘದ ಕಾರ್ಯದರ್ಶಿ ಕೆ. ರಮಣಮೂರ್ತಿ, ಸುಭಾಷ್ ಬಾಗಲಕೋಟಿ, ಕೃಷ್ಣ ಮಿಸ್ಕಿನ್, ಎನ್.ಆರ್. ಹಬೀಬ್, ಮಹಾಂತೇಶ್ ಕುಮಟಗಿಕರ್ ಸೇರಿದಂತೆ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಬಡಾವಣೆ ನಿವಾಸಿಗಳು ಉಪಸ್ಥಿತರಿದ್ದರು. ಸ್ವಾತಂತ್ರ್ಯೋತ್ಸವದ ಅಂಗವಾಗಿ ದೇಶಭಕ್ತಿ ಗೀತೆಗಳು ಹಾಗೂ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande