ರಾಜ್ಯದದಲ್ಲಿಂದು ಹಲವೆಡೆ ಮಳೆ ಮುನ್ಸೂಚನೆ
ಬೆಂಗಳೂರು, 15 ಆಗಸ್ಟ್ (ಹಿ.ಸ.): ಆ್ಯಂಕರ್: ರಾಜ್ಯದಾದ್ಯಂತ ಇಂದು ಜೋರಾದ ಗಾಳಿಯೊಂದಿಗೆ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮುನ್ಸೂಚನೆ ನೀಡಿದೆ. ಒಳನಾಡು ಜಿಲ್
ರಾಜ್ಯದದಲ್ಲಿಂದು ಹಲವೆಡೆ ಮಳೆ ಮುನ್ಸೂಚನೆ


ಬೆಂಗಳೂರು, 15 ಆಗಸ್ಟ್ (ಹಿ.ಸ.):

ಆ್ಯಂಕರ್:

ರಾಜ್ಯದಾದ್ಯಂತ ಇಂದು ಜೋರಾದ ಗಾಳಿಯೊಂದಿಗೆ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮುನ್ಸೂಚನೆ ನೀಡಿದೆ.

ಒಳನಾಡು ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಮುಂದುವರಿಯಲಿದ್ದು, ಅಲ್ಲಲ್ಲಿ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದೆ. ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande