
ಕೋಲ್ಕತ್ತಾ, 16 ಆಗಸ್ಟ್ (ಹಿ.ಸ.):
ಆ್ಯಂಕರ್:
ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ರಾಮ್‌ಪುರಹಾಟ್‌ನ ತೃಣಮೂಲ ಕಾಂಗ್ರೆಸ್‌ನ ಮಾಜಿ ಶಾಸಕ ಹಾಗೂ ವಿಧಾನಸಭೆಯ ಮಾಜಿ ಉಪಸಭಾಧ್ಯಕ್ಷ ಆಷಿಸ್ ಬಂಡೋಪಾಧ್ಯಾಯ ಅವರು ಭಾನುವಾರ ಬೆಳಗ್ಗೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ.
ರಾಮ್‌ಪುರಹಾಟ್ ನಗರದ ತಮ್ಮ ನಿವಾಸದ ಪಕ್ಕದಲ್ಲಿರುವ ಪಕ್ಷದ ಕಚೇರಿಯಲ್ಲಿ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳೀಯರು ಕಿಟಕಿಯ ಮೂಲಕ ಮೃತದೇಹವನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಘಟನಾ ಸ್ಥಳದಲ್ಲಿ ಆತ್ಮಹತ್ಯೆ ಪತ್ರವೊಂದು ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆದರೆ ಪತ್ರದ ವಿವರಗಳನ್ನು ಪೊಲೀಸರು ಅಧಿಕೃತವಾಗಿ ಬಹಿರಂಗಪಡಿಸಿಲ್ಲ.
ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಧ್ರುವ ಸಾಹಾ ವಿರುದ್ಧ ಸೋತ ಬಳಿಕ ಆಷಿಸ್ ಬಂಡೋಪಾಧ್ಯಾಯ ಅವರು ಸಕ್ರಿಯ ರಾಜಕೀಯದಿಂದ ಸ್ವಲ್ಪ ದೂರ ಉಳಿದಿದ್ದರು. ‘ಮಾಸ್ಟರ್‌ಮಶಾಯಿ’ ಎಂದೇ ಪರಿಚಿತರಾಗಿದ್ದ ಅವರ ಹೆಸರು ಇತ್ತೀಚೆಗೆ ಬೆಳಕಿಗೆ ಬಂದಿದ್ದ ಭ್ರಷ್ಟಾಚಾರದ ಆರೋಪವೊಂದರಲ್ಲೂ ಕೇಳಿಬಂದಿತ್ತು.
ಮರಣೋತ್ತರ ಪರೀಕ್ಷೆ ಹಾಗೂ ಪೊಲೀಸ್ ತನಿಖೆಯ ಬಳಿಕವೇ ಅವರ ಸಾವಿನ ನಿಖರ ಕಾರಣ ತಿಳಿದುಬರಲಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.