ನಾನು ಬೌದ್ಧಿಕ ನಕ್ಸಲ್ ಎಂದು ಹೆಮ್ಮೆಪಡುತ್ತೆನೆ: ಪಿ. ಚಿದಂಬರಂ
ನವದೆಹಲಿ, 16ಆಗಸ್ಟ್ (ಹಿ.ಸ.): ಆ್ಯಂಕರ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಿಂದ ‘ಬೌದ್ಧಿಕ ನಕ್ಸಲರ’ ಬಗ್ಗೆ ಎಚ್ಚರಿಕೆ ನೀಡಿದ್ದಕ್ಕೆ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಎಕ್ಸನಲ್ಲಿ ಪ್ರತಿಕ್ರಿಯಿಸಿದ್ದಾರೆ. ತಾವು ‘ಬೌದ್ಧಿಕ ನಕ್ಸಲ್’ ಎಂದು ಹೇಳಿಕೊಳ್ಳಲು ಹೆಮ್ಮೆಪಡುತ್ತೇನೆ ಎಂದು ಅ
चिदंबरम का ट्वीट


ನವದೆಹಲಿ, 16ಆಗಸ್ಟ್ (ಹಿ.ಸ.):

ಆ್ಯಂಕರ್:

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಿಂದ ‘ಬೌದ್ಧಿಕ ನಕ್ಸಲರ’ ಬಗ್ಗೆ ಎಚ್ಚರಿಕೆ ನೀಡಿದ್ದಕ್ಕೆ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಎಕ್ಸನಲ್ಲಿ ಪ್ರತಿಕ್ರಿಯಿಸಿದ್ದಾರೆ. ತಾವು ‘ಬೌದ್ಧಿಕ ನಕ್ಸಲ್’ ಎಂದು ಹೇಳಿಕೊಳ್ಳಲು ಹೆಮ್ಮೆಪಡುತ್ತೇನೆ ಎಂದು ಅವರು ಹೇಳಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯಿಂದ ಮಾತನಾಡಿದ್ದ ಪ್ರಧಾನಿ ಮೋದಿ, ದಶಕಗಳ ಕಾಲ ಅಧಿಕಾರದಲ್ಲಿದ್ದ ‘ಬೌದ್ಧಿಕ ನಕ್ಸಲರು’ ಅವಕಾಶಕ್ಕಾಗಿ ಕಾಯುತ್ತಿದ್ದು, ಅರಾಜಕತೆಯ ಹೊಸ ಮಾರ್ಗಗಳನ್ನು ಹುಡುಕುತ್ತಿದ್ದಾರೆ ಎಂದು ಆರೋಪಿಸಿದ್ದರು. ಸಮಾಜವನ್ನು ತಪ್ಪು ದಾರಿಗೆ ಎಳೆಯಲು ಅವರು ವಿವಿಧ ತಂತ್ರಗಳನ್ನು ಅನುಸರಿಸುತ್ತಿದ್ದಾರೆ ಎಂದಿದ್ದರು.

ದೇಶದಲ್ಲಿ ಹಿಂಸಾತ್ಮಕ ನಕ್ಸಲಿಸಂ ಅನ್ನು ನಿಯಂತ್ರಿಸುವಲ್ಲಿ ಯಶಸ್ಸು ಸಾಧಿಸಲಾಗಿದ್ದು, ಇದೀಗ ‘ಬೌದ್ಧಿಕ ನಕ್ಸಲರನ್ನು’ ಗುರುತಿಸಿ ಪ್ರತ್ಯೇಕಗೊಳಿಸುವ ಅಗತ್ಯವಿದೆ ಎಂದು ಪ್ರಧಾನಿ ಹೇಳಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಚಿದಂಬರಂ, ತಮ್ಮ ‘ಬೌದ್ಧಿಕ ನಕ್ಸಲ್’ ಎಂಬ ಹೇಳಿಕೆಯನ್ನು ಪ್ರಸ್ತಾಪಿಸಿದ್ದಾರೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande