ಬಿಹಾರದ ಅಶೋಕಧಾಮ ಶಿವ ದೇಗುಲದಲ್ಲಿ ಕಾಲ್ತುಳಿತ: ಏಳು ಭಕ್ತರ ಸಾವು
ಪಾಟ್ನಾ, 17 ಆಗಸ್ಟ್ (ಹಿ.ಸ.): ಆ್ಯಂಕರ್:ಬಿಹಾರದ ಲಖಿಸರಾಯಿ ಜಿಲ್ಲೆಯ ಅಶೋಕಧಾಮ ಶಿವ ದೇಗುಲದಲ್ಲಿ ಶ್ರಾವಣದ ಸೋಮವಾರವಾದ ಇಂದು ಬೆಳಗ್ಗೆ ಸಂಭವಿಸಿದ ಕಾಲ್ತುಳಿತದಲ್ಲಿ ಏಳು ಭಕ್ತರು ಮೃತಪಟ್ಟಿರುವುದಾಗಿ ಜಿಲ್ಲಾಧಿಕಾರಿ ಶೈಲೇಂದ್ರ ಕುಮಾರ್ ತಿಳಿಸಿದ್ದಾರೆ. ಮೃತರೆಲ್ಲರೂ ಮಹಿಳೆಯರು ಎಂದು ತಿಳಿದುಬಂದಿದೆ
ಬಿಹಾರದ ಅಶೋಕಧಾಮ ಶಿವ ದೇಗುಲದಲ್ಲಿ ಕಾಲ್ತುಳಿತ: ಏಳು ಭಕ್ತರ ಸಾವು


ಪಾಟ್ನಾ, 17 ಆಗಸ್ಟ್ (ಹಿ.ಸ.):

ಆ್ಯಂಕರ್:ಬಿಹಾರದ ಲಖಿಸರಾಯಿ ಜಿಲ್ಲೆಯ ಅಶೋಕಧಾಮ ಶಿವ ದೇಗುಲದಲ್ಲಿ ಶ್ರಾವಣದ ಸೋಮವಾರವಾದ ಇಂದು ಬೆಳಗ್ಗೆ ಸಂಭವಿಸಿದ ಕಾಲ್ತುಳಿತದಲ್ಲಿ ಏಳು ಭಕ್ತರು ಮೃತಪಟ್ಟಿರುವುದಾಗಿ ಜಿಲ್ಲಾಧಿಕಾರಿ ಶೈಲೇಂದ್ರ ಕುಮಾರ್ ತಿಳಿಸಿದ್ದಾರೆ. ಮೃತರೆಲ್ಲರೂ ಮಹಿಳೆಯರು ಎಂದು ತಿಳಿದುಬಂದಿದೆ. ಹಲವು ಭಕ್ತರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಲಾಭಿಷೇಕಕ್ಕಾಗಿ ಸುಮಾರು 55 ಸಾವಿರ ಭಕ್ತರು ದೇಗುಲಕ್ಕೆ ಆಗಮಿಸಿದ್ದರು. ಬೆಳಗ್ಗೆ 6.30ರ ಸುಮಾರಿಗೆ ಅಶೋಕಧಾಮ ರೈಲು ನಿಲ್ದಾಣದಿಂದ ದೇಗುಲದತ್ತ ಸಾಗುವ ಮಾರ್ಗದಲ್ಲಿ ಈ ಘಟನೆ ಸಂಭವಿಸಿದೆ. ಹಿಂದಿನ ರಾತ್ರಿ ವಿದ್ಯುತ್ ಕಂಬವೊಂದು ಬಿದ್ದಿತ್ತು. ಬೆಳಗ್ಗೆ ಆ ಕಂಬದಲ್ಲಿ ವಿದ್ಯುತ್ ಹರಿಯುತ್ತಿದೆ ಎಂಬ ವದಂತಿ ಹರಡಿದ ಹಿನ್ನೆಲೆಯಲ್ಲಿ ಭಕ್ತರಲ್ಲಿ ಆತಂಕ ಉಂಟಾಗಿ ಏಕಾಏಕಿ ಕಾಲ್ತುಳಿತ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಕಾಲ್ತುಳಿತದ ವೇಳೆ ಹಲವು ಭಕ್ತರು ಒಬ್ಬರ ಮೇಲೊಬ್ಬರು ಬಿದ್ದಿದ್ದು, ಕೆಲವರು ಕೆಳಗೆ ಸಿಲುಕಿಕೊಂಡಿದ್ದರು. ತಕ್ಷಣವೇ ಆಡಳಿತ ತಂಡ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದೆ.

ಮೃತರಲ್ಲಿ ಮಧುಬಾಲಾ ದೇವಿ, ಮನಮಾಲಾ ದೇವಿ, ರಿಂಕು ದೇವಿ ಹಾಗೂ ಹೇಮಲತಾ ದೇವಿ ಸೇರಿದಂತೆ ನಾಲ್ವರನ್ನು ಗುರುತಿಸಲಾಗಿದೆ. ಗಾಯಗೊಂಡವರಲ್ಲಿ ಏಳು ಮಹಿಳೆಯರೂ ಸೇರಿದ್ದಾರೆ.

ಘಟನೆಯ ಬಗ್ಗೆ ಮುಖ್ಯಮಂತ್ರಿ ಸಮ್ರಾಟ್ ಚೌಧರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಆಳವಾದ ಸಂತಾಪ ಸೂಚಿಸಿರುವ ಅವರು, ಗಾಯಾಳುಗಳಿಗೆ ಸಮರ್ಪಕ ಹಾಗೂ ತ್ವರಿತ ಚಿಕಿತ್ಸೆ ನೀಡುವಂತೆ ಆಡಳಿತಕ್ಕೆ ಅಗತ್ಯ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಘಟನೆಯ ಹಿನ್ನೆಲೆಯಲ್ಲಿ ದೇಗುಲದ ಸುತ್ತಮುತ್ತ ಪೊಲೀಸ್ ಹಾಗೂ ಆಡಳಿತಾಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ಮತ್ತು ಪರಿಸ್ಥಿತಿ ನಿಯಂತ್ರಣದ ಕಾರ್ಯದಲ್ಲಿ ತೊಡಗಿದ್ದಾರೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande