ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ನಿವಾಸದ ಮೇಲೆ ಇಡಿ ದಾಳಿ
ಬೆಂಗಳೂರು ಸೇರಿದಂತೆ 13 ಕಡೆ ಶೋಧ
Ed ride


ಬೆಂಗಳೂರು, 18 ಆಗಸ್ಟ್ (ಹಿ.ಸ.)

ಆ್ಯಂಕರ್:

ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರಿಗೆ ಜಾರಿ ನಿರ್ದೇಶನಾಲಯ ತೀವ್ರ ಶಾಕ್ ನೀಡಿದೆ.

ಮಂಗಳವಾರ ಬೆಳ್ಳಂಬೆಳಗ್ಗೆ ಶಿವಶಂಕರಪ್ಪ ಸಾಹುಕಾರ್ ಅವರಿಗೆ ಸೇರಿದ ಬೆಂಗಳೂರಿನ ಡಾಕ್ಟರ್ ಕಲೋನಿಯ ಮನೆ ಸೇರಿದಂತೆ ಒಟ್ಟು 13 ಕಡೆಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ಮುಂದುವರಿಸಿದ್ದಾರೆ.

ಬೆಂಗಳೂರಿನ ಡಾಲರ್ಸ್ ಕಾಲೋನಿಯ ಹೊಯ್ಸಳ ಡ್ರೀಮ್ಸ್ ಅಪಾರ್ಟ್ಮೆಂಟ್ನಲ್ಲಿರುವ ಫ್ಲ್ಯಾಟ್ನಲ್ಲಿ ಈ ಶೋಧ ಕಾರ್ಯ ನಡೆಯುತ್ತಿದೆ. ಸಾಹುಕಾರ್ ಅವರಿಗೆ ಸೇರಿದ ಅಪಾರ್ಟ್ಮೆಂಟ್ನ 304ನೇ ನಂಬರ್ ಫ್ಲ್ಯಾಟ್ನಲ್ಲಿ ಇಡಿ ಅಧಿಕಾರಿಗಳ ತಂಡವು ದಾಖಲೆಗಳನ್ನು ಪರಿಶೀಲಿಸುತ್ತಿದೆ.

ಹಣ ವರ್ಗಾವಣೆ ಹಾಗೂ ನೇಮಕಾತಿಯಲ್ಲಿ ನಡೆದ ಅಕ್ರಮಗಳ ಹಿನ್ನೆಲೆ ಈ ದಾಳಿ ಮಹತ್ವದ್ದಾಗಿದ್ದು, ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ದಾಳಿಯ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

--

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande