ಯುವಕರ ಸ್ಥಿತಿ, ರಾಮಮಂದಿರ ದೇಣಿಗೆ ಮತ್ತು ಗಡಿ ಭದ್ರತೆ ಕುರಿತು ಸರ್ಕಾರ ಉತ್ತರಿಸಲಿ: ಖರ್ಗೆ
ನವದೆಹಲಿ, 19 ಆಗಸ್ಟ್ (ಹಿ.ಸ.): ಆ್ಯಂಕರ್: ಯುವಕರ ಭವಿಷ್ಯ, ರಾಮಮಂದಿರದ ದೇಣಿಗೆ ಅವ್ಯವಹಾರ ಹಾಗೂ ದೇಶದ ಗಡಿ ಭದ್ರತೆ ಕುರಿತು ಕೇಂದ್ರ ಸರ್ಕಾರ ಸ್ಪಷ್ಟ ಉತ್ತರ ನೀಡಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ. ನವದೆಹಲಿಯಲ್ಲಿ ಬುಧವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸ
कांग्रेस कार्यसमिति (सीडब्ल्यूसी) की बैठक में कांग्रेस अध्यक्ष मल्लिकार्जुन खरगे, संसदीय दल की अध्यक्ष सोनिया गांधी, विपक्ष के नेता राहुल गांधी, एआईसीसी महासचिव (संगठन) के.सी. वेणुगोपाल और एआईसीसी महासचिव प्रियंका गांधी समेत पार्टी के शीर्ष नेता मौजूद।


ನವದೆಹಲಿ, 19 ಆಗಸ್ಟ್ (ಹಿ.ಸ.):

ಆ್ಯಂಕರ್:

ಯುವಕರ ಭವಿಷ್ಯ, ರಾಮಮಂದಿರದ ದೇಣಿಗೆ ಅವ್ಯವಹಾರ ಹಾಗೂ ದೇಶದ ಗಡಿ ಭದ್ರತೆ ಕುರಿತು ಕೇಂದ್ರ ಸರ್ಕಾರ ಸ್ಪಷ್ಟ ಉತ್ತರ ನೀಡಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.

ನವದೆಹಲಿಯಲ್ಲಿ ಬುಧವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದ ನೀತಿಗಳಿಂದ ಯುವಕರು ನಿರುದ್ಯೋಗ ಮತ್ತು ಹತಾಶೆಗೆ ಸಿಲುಕಿದ್ದಾರೆ ಎಂದು ಆರೋಪಿಸಿದರು. ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಗಳ ನಿರ್ಲಕ್ಷ್ಯ, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ನೇಮಕಾತಿ ಅಕ್ರಮಗಳಿಂದ ಯುವಕರು ಬೀದಿಗಿಳಿಯುವಂತಾಗಿದೆ. ಯುವಕರಿಗಾಗಿ ಶಿಕ್ಷಣದಿಂದ ಉದ್ಯೋಗದವರೆಗೆ ಸ್ಪಷ್ಟ ಹಾಗೂ ಕಾಲಮಿತಿಯ ಮಾರ್ಗಸೂಚಿಯನ್ನು ಕಾಂಗ್ರೆಸ್ ರೂಪಿಸಲಿದೆ ಎಂದರು.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಆಡಳಿತಾವಧಿಯಲ್ಲಿ ಮತದಾನದ ವಯಸ್ಸು ಇಳಿಕೆ, ನವೋದಯ ವಿದ್ಯಾಲಯಗಳ ವಿಸ್ತರಣೆ ಹಾಗೂ ಶಿಕ್ಷಣದಲ್ಲಿ ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿಗೆ ಒತ್ತು ನೀಡಲಾಗಿತ್ತು ಎಂದು ಖರ್ಗೆ ಹೇಳಿದರು. ಶಿಕ್ಷಣ ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳ ಮೂಲಕ ದೇಶಕ್ಕೆ ಹೊಸ ದಿಕ್ಕು ನೀಡಲಾಗಿತ್ತು. ಆದರೆ ಕಳೆದ 12 ವರ್ಷಗಳಲ್ಲಿ ಕೇಂದ್ರ ಸರ್ಕಾರದ ನೀತಿಗಳು ಯುವಕರ ಭವಿಷ್ಯಕ್ಕೆ ಹಾನಿ ಮಾಡಿವೆ ಎಂದು ಟೀಕಿಸಿದರು.

ರಾಮಮಂದಿರ ಟ್ರಸ್ಟ್‌ಗೆ ಜನರು ಭಕ್ತಿಯಿಂದ ದೇಣಿಗೆ ನೀಡಿದ್ದು, ಅಲ್ಲಿ ಭಾರಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಭಕ್ತ ಜನತೆಗೆ ಸ್ಪಷ್ಟ ಉತ್ತರ ನೀಡಬೇಕು ಎಂದು ಖರ್ಗೆ ಒತ್ತಾಯಿಸಿದರು.

ಚೀನಾದ ಗಡಿ ಅತಿಕ್ರಮಣಕ್ಕೆ ಸಂಬಂಧಿಸಿದ ಗಂಭೀರ ವಿಚಾರಗಳು ಬೆಳಕಿಗೆ ಬಂದಿವೆ. ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ರಾಜಕೀಯ ಮಾಡಬಾರದು, ಆದರೆ ವಾಸ್ತವಾಂಶಗಳನ್ನು ಮರೆಮಾಚುವುದೂ ಸರಿಯಲ್ಲ ಎಂದರು. ಗಲ್ವಾನ್ ಸಂಘರ್ಷದ ಬಳಿಕ ಪ್ರಧಾನಿ ನೀಡಿದ್ದ ಹೇಳಿಕೆಗಳ ಬಗ್ಗೆಯೂ ಪ್ರಶ್ನೆಗಳು ಮುಂದುವರಿದಿವೆ ಎಂದು ಹೇಳಿದರು.

ಯುವಕರ ಭವಿಷ್ಯ, ಜನರ ನಂಬಿಕೆ ಹಾಗೂ ದೇಶದ ಗಡಿಗಳು ಸರ್ಕಾರದ ಉತ್ತರದಾಯಿತ್ವಕ್ಕೆ ಸಂಬಂಧಿಸಿದ ಪ್ರಮುಖ ಪ್ರಶ್ನೆಗಳಾಗಿವೆ. ಮುಂಬರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಈ ವಿಚಾರಗಳ ಕುರಿತು ಗಂಭೀರ ಚರ್ಚೆ ನಡೆಸಿ, ಜನರ ಮುಂದೆ ಪರ್ಯಾಯ ನೀತಿ ಹಾಗೂ ಪರಿಹಾರಗಳನ್ನು ಮಂಡಿಸಬೇಕು ಎಂದು ಖರ್ಗೆ ಕರೆ ನೀಡಿದರು.

ಸಭೆಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್, ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್‌ನ ಪ್ರಮುಖ ನಾಯಕರು ಉಪಸ್ಥಿತರಿದ್ದರು.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande