ಕೊಲ್ಕತ್ತಾ ಅಗ್ನಿ ಅವಘಡ: ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿಯಿಂದ ಸಂತಾಪ
ನವದೆಹಲಿ, 19 ಆಗಸ್ಟ್ (ಹಿ.ಸ.): ಆ್ಯಂಕರ್:ಕೊಲ್ಕತ್ತಾದ ಫ್ರೀ ಸ್ಕೂಲ್ ಸ್ಟ್ರೀಟ್ ಪ್ರದೇಶದಲ್ಲಿರುವ ಹೋಟೆಲ್‌ನಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಒಂಬತ್ತು ಮಂದಿ ಮೃತಪಟ್ಟಿರುವ ಘಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಹಾಗೂ ಪ್ರಧಾನಿ ನರೇಂ
राष्ट्रपति द्रौपदी मूर्मू (फाइल फोटो)।


ನವದೆಹಲಿ, 19 ಆಗಸ್ಟ್ (ಹಿ.ಸ.):

ಆ್ಯಂಕರ್:ಕೊಲ್ಕತ್ತಾದ ಫ್ರೀ ಸ್ಕೂಲ್ ಸ್ಟ್ರೀಟ್ ಪ್ರದೇಶದಲ್ಲಿರುವ ಹೋಟೆಲ್‌ನಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಒಂಬತ್ತು ಮಂದಿ ಮೃತಪಟ್ಟಿರುವ ಘಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಅಗ್ನಿ ಅವಘಡದಲ್ಲಿ ಜನರು ಮೃತಪಟ್ಟಿರುವ ಸುದ್ದಿ ಅತ್ಯಂತ ದುಃಖಕರವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಅವರು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಕೂಡ ಘಟನೆಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಆಳವಾದ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಅಗ್ನಿ ಅವಘಡಕ್ಕೆ ಸಂತಾಪ ಸೂಚಿಸಿದ್ದು, ದುಃಖದ ಈ ಸಂದರ್ಭದಲ್ಲಿ ತಮ್ಮ ಆಲೋಚನೆಗಳು ಹಾಗೂ ಪ್ರಾರ್ಥನೆಗಳು ಸಂತ್ರಸ್ತ ಕುಟುಂಬಗಳೊಂದಿಗಿವೆ ಎಂದಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿರುವ ಪ್ರಧಾನಿ, ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವನ್ನು ಒದಗಿಸುತ್ತಿದೆ ಎಂದು ತಿಳಿಸಿದ್ದಾರೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande