ಬಡವರ ಹೊಟ್ಟೆ ಹೊಡೆಯುತ್ತಿರುವ ಕಮಿಷನ್ ಸರ್ಕಾರ: ಆರ್. ಅಶೋಕ್ ವಾಗ್ದಾಳಿ
ಬೆಂಗಳೂರು, 20 ಆಗಸ್ಟ್ (ಹಿ.ಸ.): ಆ್ಯಂಕರ್:ಇಂದಿರಾ ಕ್ಯಾಂಟೀನ್‌ಗಳಲ್ಲಿ ಶುಚಿತ್ವ ಮತ್ತು ಆಹಾರದ ಗುಣಮಟ್ಟದ ಕೊರತೆ ಇದೆ ಎಂದು ಆರೋಪಿಸಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ‘ಬಡವರು, ಕೂಲಿ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳ
ಅಶೋಕ


ಬೆಂಗಳೂರು, 20 ಆಗಸ್ಟ್ (ಹಿ.ಸ.):

ಆ್ಯಂಕರ್:ಇಂದಿರಾ ಕ್ಯಾಂಟೀನ್‌ಗಳಲ್ಲಿ ಶುಚಿತ್ವ ಮತ್ತು ಆಹಾರದ ಗುಣಮಟ್ಟದ ಕೊರತೆ ಇದೆ ಎಂದು ಆರೋಪಿಸಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

‘ಬಡವರು, ಕೂಲಿ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಆಹಾರ ಒದಗಿಸಬೇಕಿದ್ದ ಇಂದಿರಾ ಕ್ಯಾಂಟೀನ್‌ಗಳು ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತು ನಿರ್ಲಕ್ಷ್ಯದಿಂದ ಅಧೋಗತಿಗೆ ತಲುಪಿವೆ’ ಎಂದು ಅವರು ಎಕ್ಸ್‌ನಲ್ಲಿ ಆರೋಪಿಸಿದ್ದಾರೆ.

ಕ್ಯಾಂಟೀನ್‌ಗಳ ಅಡುಗೆಮನೆ ಮತ್ತು ಗೋದಾಮುಗಳಲ್ಲಿ ಇಲಿ-ಹೆಗ್ಗಣಗಳು ಓಡಾಡುತ್ತಿದ್ದು, ಸಾರ್ವಜನಿಕರ ಆರೋಗ್ಯದೊಂದಿಗೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಅಶೋಕ್ ಆರೋಪಿಸಿದ್ದಾರೆ. ಆಹಾರ ತಯಾರಿಸುವ ಸಿಬ್ಬಂದಿಗೆ ಸಮರ್ಪಕ ಸಮವಸ್ತ್ರ, ಟೋಪಿ ಹಾಗೂ ಕೈಗವಸುಗಳಿಲ್ಲ. ಆಹಾರ ಸುರಕ್ಷತಾ ಇಲಾಖೆಯ ತಪಾಸಣೆಯಲ್ಲಿ ಧಾನ್ಯಗಳ ಚೀಲಗಳನ್ನು ಇಲಿಗಳು ಕಡಿದಿರುವುದು ಹಾಗೂ ನೈರ್ಮಲ್ಯದ ಕೊರತೆ ಕಂಡುಬಂದಿದೆ ಎಂದು ಹೇಳಿದ್ದಾರೆ.

ಮೆನುವಿನಲ್ಲಿರುವ ಆಹಾರ ಪದಾರ್ಥಗಳು ಸಮರ್ಪಕವಾಗಿ ದೊರೆಯುತ್ತಿಲ್ಲ. ಅನ್ನ-ಸಾಂಬಾರ್ ಹೊರತುಪಡಿಸಿ ಇತರೆ ಆಹಾರ ಸಿಗುತ್ತಿಲ್ಲ ಹಾಗೂ ಆಹಾರದ ರುಚಿ ಮತ್ತು ಪ್ರಮಾಣದಲ್ಲೂ ಕೊರತೆಯಿದೆ ಎಂದು ಆರೋಪಿಸಿದ್ದಾರೆ.

ಆನ್‌ಲೈನ್ ಆಹಾರ ಆರ್ಡರ್ ವ್ಯವಸ್ಥೆ ಜಾರಿಗೆ ತರುವುದಾಗಿ ಸರ್ಕಾರ ಘೋಷಿಸಿ ಎರಡು ವರ್ಷ ಕಳೆದರೂ ಮೂಲಭೂತ ನೈರ್ಮಲ್ಯ ಹಾಗೂ ಆಹಾರದ ಗುಣಮಟ್ಟ ಕಾಪಾಡಲು ವಿಫಲವಾಗಿದೆ ಎಂದು ಟೀಕಿಸಿದ್ದಾರೆ.

ತಕ್ಷಣ ಇಂದಿರಾ ಕ್ಯಾಂಟೀನ್‌ಗಳ ಅವ್ಯವಸ್ಥೆ ಸರಿಪಡಿಸಿ, ಜನರಿಗೆ ಶುಚಿ ಮತ್ತು ಗುಣಮಟ್ಟದ ಆಹಾರ ಒದಗಿಸಬೇಕು. ಇಲ್ಲವಾದರೆ ಸರ್ಕಾರದ ವಿರುದ್ಧ ಬೃಹತ್ ಹೋರಾಟ ನಡೆಸಬೇಕಾಗುತ್ತದೆ ಎಂದು ಅಶೋಕ್ ಎಚ್ಚರಿಕೆ ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande