
ಚೆನೈ, 20 ಆಗಸ್ಟ್ (ಹಿ.ಸ.):
ಆ್ಯಂಕರ್:ತಮಿಳುನಾಡಿನ ಚೆನ್ನೈ ಸಮೀಪದ ಮಹಾಬಲಿಪುರಂನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ದಕ್ಷಿಣ ವಲಯ ಮಂಡಳಿಯ 31ನೇ ಸಭೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿದರು.
ಸಭೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್, ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್, ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ತೆಲಂಗಾಣ ಉಪ ಮುಖ್ಯಮಂತ್ರಿ ಬಟ್ಟಿ ವಿಕ್ರಮಾರ್ಕ ಹಾಗೂ ಕರ್ನಾಟಕದ ಐಟಿ-ಬಿಟಿ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳ ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ದಕ್ಷಿಣ ರಾಜ್ಯಗಳಿಗೆ ಸಂಬಂಧಿಸಿದ ವಿವಿಧ ಪ್ರಮುಖ ವಿಚಾರಗಳು ಹಾಗೂ ಅಭಿವೃದ್ಧಿ ಸಂಬಂಧಿತ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.