ದೇವರಾಜ ಅರಸು ಜನ್ಮದಿನ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೌರವ ನಮನ
ಬೆಂಗಳೂರು, 20 ಆಗಸ್ಟ್ (ಹಿ.ಸ.): ಆ್ಯಂಕರ್: ಹಿಂದುಳಿದ ವರ್ಗಗಳ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನದ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗೌರವಪೂರ್ವಕ ನಮನ ಸಲ್ಲಿಸಿದ್ದಾರೆ. ಎಕ್ಸನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ‘ಉಳುವವನೇ ಹೊಲದೊಡೆಯ’ ಎಂಬ ಕ್ರಾಂತಿ
Cm X post


ಬೆಂಗಳೂರು, 20 ಆಗಸ್ಟ್ (ಹಿ.ಸ.):

ಆ್ಯಂಕರ್:

ಹಿಂದುಳಿದ ವರ್ಗಗಳ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನದ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗೌರವಪೂರ್ವಕ ನಮನ ಸಲ್ಲಿಸಿದ್ದಾರೆ.

ಎಕ್ಸನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ‘ಉಳುವವನೇ ಹೊಲದೊಡೆಯ’ ಎಂಬ ಕ್ರಾಂತಿಕಾರಿ ಕಾಯ್ದೆ ಸೇರಿದಂತೆ ಸಾಮಾಜಿಕ ನ್ಯಾಯ ಹಾಗೂ ಸಮಾನತೆಯ ಹಾದಿಯಲ್ಲಿ ದೇವರಾಜ ಅರಸು ಅವರು ಕೈಗೊಂಡ ಕ್ರಮಗಳು ರಾಜ್ಯದ ಅಭಿವೃದ್ಧಿಯಲ್ಲಿ ಮಹತ್ವದ ಮೈಲಿಗಲ್ಲುಗಳಾಗಿವೆ. ಅವರ ಆದರ್ಶ ಮತ್ತು ತತ್ವಗಳು ಇಂದಿಗೂ ನಮಗೆಲ್ಲರಿಗೂ ದಾರಿದೀಪವಾಗಿವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಮರಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande