ಹಾವೇರಿಯಲ್ಲಿ ಭೀಕರ ಅಪಘಾತ: ಮೂವರು ಸಾವು, ಮೂವರಿಗೆ ಗಾಯ
ಹಾವೇರಿ, 20 ಆಗಸ್ಟ್ (ಹಿ.ಸ.): ಆ್ಯಂಕರ್: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ರಾಣೇಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಬಳಿ ನಡೆದಿದೆ. ಕಾರು ರಾಣೇಬೆನ್ನೂರಿನಿಂದ ದಾವಣಗೆರೆ ಕಡೆಗೆ ತೆರಳುತ್
Accident


ಹಾವೇರಿ, 20 ಆಗಸ್ಟ್ (ಹಿ.ಸ.):

ಆ್ಯಂಕರ್:

ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ರಾಣೇಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಬಳಿ ನಡೆದಿದೆ.

ಕಾರು ರಾಣೇಬೆನ್ನೂರಿನಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದ ವೇಳೆ ಚಳಗೇರಿ ಟೋಲ್ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ದಾವಣಗೆರೆಯ ನಿಟವಳ್ಳಿ ಮೌನೇಶ್ವರ ಬಡಾವಣೆ ನಿವಾಸಿಗಳಾದ ಸಿದ್ದಾರ್ಥ (27), ಹಸನ್ಮುಖಿ (29) ಹಾಗೂ ಯಶೋಧಾ ಬಾಯಿ (51) ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಸೌಂದರ್ಯ (26), ಸಿಂಧು (24) ಹಾಗೂ ಒಂದು ವರ್ಷದ ಮಗು ಕಶ್ವಶ್ರೀ ಗಾಯಗೊಂಡಿದ್ದು, ಅವರನ್ನು ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande