ಇಮ್ರಾನ್ ಖಾನ್ರನ್ನು ಜೈಲಿನಲ್ಲೇ ಇರಿಸಲು ಪಾಕಿಸ್ತಾನ ಸರ್ಕಾರದ ತಂತ್ರ; ಸುಪ್ರೀಂ ಕೋರ್ಟ್ ತೀರ್ಪಿನ ಮರುಪರಿಶೀಲನೆಗೆ ಅರ್ಜಿ
ಇಸ್ಲಾಮಾಬಾದ್, 20 ಆಗಸ್ಟ್ (ಹಿ.ಸ.): ಆ್ಯಂಕರ್:ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಮುಖ್ಯಸ್ಥ ಇಮ್ರಾನ್ ಖಾನ್ ಅವರನ್ನು ಇಸ್ಲಾಮಾಬಾದ್‌ನ ಶಿಫಾ ಇಂಟರ್‌ನ್ಯಾಷನಲ್ ಆಸ್ಪತ್ರೆಗೆ ದಾಖಲಿಸುವಂತೆ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶಕ್ಕೆ ಪಾಕಿಸ್ತಾನ ಸರ್ಕಾರ ತೀವ
पाकिस्तान के अपदस्थ प्रधानमंत्री इमरान खान।  फोटो - इंटरनेट मीडिया


ಇಸ್ಲಾಮಾಬಾದ್, 20 ಆಗಸ್ಟ್ (ಹಿ.ಸ.):

ಆ್ಯಂಕರ್:ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಮುಖ್ಯಸ್ಥ ಇಮ್ರಾನ್ ಖಾನ್ ಅವರನ್ನು ಇಸ್ಲಾಮಾಬಾದ್‌ನ ಶಿಫಾ ಇಂಟರ್‌ನ್ಯಾಷನಲ್ ಆಸ್ಪತ್ರೆಗೆ ದಾಖಲಿಸುವಂತೆ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶಕ್ಕೆ ಪಾಕಿಸ್ತಾನ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಆದೇಶವನ್ನು ಹಿಂಪಡೆಯುವಂತೆ ಕೋರಿ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸಿದೆ.

ರಾವಲ್ಪಿಂಡಿಯ ಆದಿಯಾಲಾ ಜೈಲಿನಲ್ಲಿ ಬಂಧಿಯಾಗಿರುವ ಇಮ್ರಾನ್ ಖಾನ್ ಅವರನ್ನು ಎರಡು ದಿನಗಳೊಳಗೆ ಶಿಫಾ ಆಸ್ಪತ್ರೆಗೆ ದಾಖಲಿಸಿ, ಸೆಪ್ಟೆಂಬರ್ 16ರವರೆಗೆ ಚಿಕಿತ್ಸೆ ನೀಡುವಂತೆ ಸುಪ್ರೀಂ ಕೋರ್ಟ್ ಆಗಸ್ಟ್ 18ರಂದು ನಿರ್ದೇಶಿಸಿತ್ತು. ಅವರ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಗಾಗಿ ವೈದ್ಯಕೀಯ ಮಂಡಳಿ ರಚಿಸುವಂತೆಯೂ ಸೂಚಿಸಿತ್ತು.

ಸರ್ಕಾರದ ಮರುಪರಿಶೀಲನಾ ಅರ್ಜಿಯಲ್ಲಿ ಸುಪ್ರೀಂ ಕೋರ್ಟ್‌ನ ಮಧ್ಯಂತರ ಆದೇಶವು ತನ್ನ ಅಧಿಕಾರ ವ್ಯಾಪ್ತಿಯನ್ನು ಮೀರಿದೆ ಹಾಗೂ ತಾರತಮ್ಯದಿಂದ ಕೂಡಿದೆ ಎಂದು ವಾದಿಸಲಾಗಿದೆ. ಜೈಲಿನಲ್ಲಿರುವ ಕೈದಿಯನ್ನು ಆಸ್ಪತ್ರೆಗೆ ಸ್ಥಳಾಂತರಿಸಲು ಸರ್ಕಾರದ ಅನುಮತಿ ಮತ್ತು ಜೈಲು ಮಹಾನಿರೀಕ್ಷಕರ ಮೂಲಕ ಅಗತ್ಯ ಕ್ರಮ ಕೈಗೊಳ್ಳಬೇಕಾಗುತ್ತದೆ. ಆಸ್ಪತ್ರೆಗೆ ದಾಖಲಿಸಿದ ಬಳಿಕವೂ ಕೈದಿಯನ್ನು ಪೊಲೀಸ್ ಭದ್ರತೆಯಲ್ಲಿ ಇರಿಸಬೇಕೆಂದು ಜೈಲು ನಿಯಮಗಳು ಸ್ಪಷ್ಟಪಡಿಸುತ್ತವೆ ಎಂದು ಸರ್ಕಾರ ತಿಳಿಸಿದೆ.

ಇಮ್ರಾನ್ ಖಾನ್ ಅವರು ಚಿಕಿತ್ಸೆಗಾಗಿ ಶಿಫಾ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಈ ಹಿಂದೆ ಇಸ್ಲಾಮಾಬಾದ್ ಹೈಕೋರ್ಟ್‌ಗೆ ಮನವಿ ಮಾಡಿದ್ದರು. ಆದರೆ ಮಾರ್ಚ್ 12ರಂದು ಹೈಕೋರ್ಟ್ ಮನವಿ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ಸುಪ್ರೀಂ ಕೋರ್ಟ್ ಆದೇಶದಂತೆ ಇಮ್ರಾನ್ ಖಾನ್ ಅವರ ಖಾಸಗಿ ವೈದ್ಯರು ಹಾಗೂ ಸಹೋದರಿ ವೈದ್ಯಕೀಯ ಆರೈಕೆಯಲ್ಲಿ ಭಾಗವಹಿಸಲು ಅವಕಾಶವಿದೆ. ಆಸ್ಪತ್ರೆಯಲ್ಲಿರುವ ಅವಧಿಯಲ್ಲಿ ವಾರಕ್ಕೊಮ್ಮೆ ಕುಟುಂಬ ಸದಸ್ಯರನ್ನು ಭೇಟಿಯಾಗಲು ಕೂಡ ನ್ಯಾಯಾಲಯ ಅನುಮತಿ ನೀಡಿದೆ. ಚಿಕಿತ್ಸೆಯ ವೆಚ್ಚವನ್ನು ಅವರ ಕುಟುಂಬವೇ ಭರಿಸಲಿದೆ.

ಇಮ್ರಾನ್ ಖಾನ್ 2023ರ ಆಗಸ್ಟ್‌ನಿಂದ ಆದಿಯಾಲಾ ಜೈಲಿನಲ್ಲಿದ್ದಾರೆ. ಅವರಿಗೆ ಸಮರ್ಪಕ ವೈದ್ಯಕೀಯ ಸೌಲಭ್ಯ, ಕುಟುಂಬ ಸದಸ್ಯರ ಭೇಟಿ ಹಾಗೂ ಕಾನೂನು ಸಲಹೆಗಾರರ ಪ್ರವೇಶ ನಿರಾಕರಿಸಲಾಗುತ್ತಿದೆ ಎಂದು ಕುಟುಂಬಸ್ಥರು ಮತ್ತು ಪಿಟಿಐ ನಾಯಕರು ಹಲವು ಬಾರಿ ಆರೋಪಿಸಿದ್ದಾರೆ. ಇದೀಗ ಸರ್ಕಾರ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande