ಬೆಳ್ಳೂರು ಟೋಲ್ ಬಳಿ ಖಾಸಗಿ ಬಸ್ ಅಪಘಾತ: ಇಬ್ಬರು ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ
ಮಂಡ್ಯ, 20 ಆಗಸ್ಟ್ (ಹಿ.ಸ.): ಆ್ಯಂಕರ್: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಬೆಳ್ಳೂರು ಟೋಲ್ ಸಮೀಪ ಇಂದು ಮುಂಜಾನೆ ಉಡುಪಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತ
ಗಾಯಾಳುಗಳ ಆರೋಗ್ಯ ವಿಚಾರಣೆ


ಮಂಡ್ಯ, 20 ಆಗಸ್ಟ್ (ಹಿ.ಸ.):

ಆ್ಯಂಕರ್:

ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಬೆಳ್ಳೂರು ಟೋಲ್ ಸಮೀಪ ಇಂದು ಮುಂಜಾನೆ ಉಡುಪಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಅಪಘಾತದ ಮಾಹಿತಿ ತಿಳಿದು ಸ್ಥಳಕ್ಕೆ ಮಂಡ್ಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೆ ಕಾರಣ ಹಾಗೂ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದು, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಬಳಿಕ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ಸ್ಥಿತಿಯನ್ನು ವಿಚಾರಿಸಿದರು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ.

ಅಪಘಾತದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಸ್ಥಿತಿ ನಿಯಂತ್ರಿಸಿದರು. ಘಟನೆ ಕುರಿತು ಹೆಚ್ಚಿನ ಮಾಹಿತಿ ಹಾಗೂ ಅಪಘಾತದ ನಿಖರ ಕಾರಣ ತನಿಖೆಯ ಬಳಿಕ ತಿಳಿದುಬರಬೇಕಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande